ರಾಯಚೂರು

ಕ್ರಿಯಾಶೀಲ ಶಿಕ್ಷಕರು, ಮೌಲ್ಯಗಳ ಪಠ್ಯಕ್ರಮ, ಸೌಲಭ್ಯ ಅಗತ್ಯ

Published On :

ರಾಯಚೂರು: ವಿದ್ಯಾರ್ಥಿಗಳನ್ನು ಬದುಕಿನಲ್ಲಿ ಕ್ರಿಯಾಶೀಲರಾಗಿಸುವಂಥ ಶಿಕ್ಷಕರು, ಜೀವನದ ಮೌಲ್ಯ ತಿಳಿಸಿಕೊಡುವ ಪಠ್ಯಕ್ರಮ, ಅತ್ಯಾಧುನಿಕ ಸೌಲಭ್ಯಗಳುಳ್ಳ ಶಾಲೆಗಳ ಅವಶ್ಯಕತೆಯಿದೆ. ಅದು ಸಾಧ್ಯವಾದಲ್ಲಿ ಮಾತ್ರ ಕ್ರಿಯಾಶೀಲ ಹಾಗೂ ಅಗಾಧ ಜ್ಞಾನ ಹೊಂದಿದವರನ್ನು ರೂಪಿಸಲು ಸಾಧ್ಯ ಎಂದು ಮಾಜಿ ರಾಷ್ಟ್ರಪತಿ ಡಾ.ಅಬ್ದುಲ್ ಕಲಾಂ ಸಲಹೆ ನೀಡಿದರು.
ನಗರದಲ್ಲಿ ಶನಿವಾರ ಕೃಷಿ ವಿವಿ ಪ್ರೇಕ್ಷಾಗೃಹದಲ್ಲಿ ಸೈನ್ಸ್ ಎಜುಕೇಶನ್ ಟ್ರಸ್ಟ್ ಮತ್ತು ಉಪವಲಯ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಕ್ರಿಯಾಶೀಲರಾಗಿರಬೇಕು. ಜಡತ್ವದಿಂದ ಭವಿಷ್ಯ ಉಜ್ವಲವಾಗದು. ಪಾಲಕರೂ ಸಹ ತಮ್ಮ ಮಕ್ಕಳ ಕಲಿಕಾಸಕ್ತಿಯನ್ನು ಗುರುತಿಸಿ ಅವರ ಸಾಮರ್ಥ್ಯ ಅರಿತು ಮುಂದುವರಿಯಲು ಅನುವು ಮಾಡಿಕೊಡುವಂತೆ ತಿಳಿ ಹೇಳಿದರು.
ವಿದ್ಯಾರ್ಥಿಗಳೂ ಸಹ ಪಾಲಕರು, ಶಿಕ್ಷಕರು ಮತ್ತು ಹಿರಿಯರನ್ನು ಗೌರವಿಸುವ ಗುಣ ರೂಢಿಸಿಕೊಳ್ಳಬೇಕು. ಆತ್ಮಸ್ಥೈರ್ಯದಿಂದ ಬದುಕಿನಲ್ಲಿ ಎಲ್ಲವನ್ನೂ ಸಾಧಿಸಲು ಸಾಧ್ಯ. ಈ ಹಿನ್ನೆಲೆಯಲ್ಲಿ ನಿರಂತರ ಅಧ್ಯಯನ, ಕಠಿಣ ಪರಿಶ್ರಮ ಹಾಗೂ ಆಸಕ್ತಿಯಿಂದ ಮಾತ್ರ ನಿರ್ದಿಷ್ಟ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಯಾವಾಗಲೂ ಅದ್ವಿತೀಯವಾದುದನ್ನು ಸಾಧಿಸಲು ತುಡಿಯುತ್ತಿರಬೇಕು. ಈ ನಿಟ್ಟಿನಲ್ಲಿ ಗುರಿ ಸೇರಲು ಕಠಿಣ ಪರಿಶ್ರಮ ಅಗತ್ಯ. ಮಹತ್ವಾಕಾಂಕ್ಷೆಯ ಗುರಿ, ನಿರಂತರ ಜ್ಞಾನ ಪಡೆಯುವಿಕೆಯಿಂದ ಜಾಗತಿಕ ಸವಾಲುಗಳನ್ನು ಸಮರ್ಥವಾಗಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಎದುರಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ವಿವಿ ಕುಲಪತಿ ಡಾ.ಬಿ.ವಿ.ಪಾಟೀಲ್, ಜಿಲ್ಲಾಧಿಕಾರಿ ಉಜ್ವಲಕುಮಾರ್ ಘೋಷ್, ಸೈನ್ಸ್ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಪ್ರೊ. ಸಿ.ಡಿ.ಪಾಟೀಲ್ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.