ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ; ಅಗತ್ಯ ಸಿದ್ಧತೆ
ಕನ್ನಡಪ್ರಭ ವಾರ್ತೆ, ರಾಯಚೂರು, ಮಾ.31
ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಏ.1ರಿಂದ ಆರಂಭಗೊಳ್ಳುತ್ತಿದ್ದು, ಅದಕ್ಕಾಗಿ ಅಗತ್ಯ ಪೂರ್ವಭಾವಿ ಸಿದ್ಧತೆಗಳು ಪೂರ್ಣಗೊಂಡಿವೆ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 21,813 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಡಿಡಿಪಿಐ ಪರಮೇಶ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಒಟ್ಟು 75 ಪರೀಕ್ಷೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 11,543 ಬಾಲಕರು, 10,270 ಬಾಲಕಿಯರು ಈ ಬಾರಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆ ವೇಳೆ ನಕಲು ತಡೆಗೆ ಕಠಿಣ ಕ್ರಮ ಕೈಗೊಂಡಿದ್ದು, ಒಟ್ಟು 75 ಕೇಂದ್ರಗಳಲ್ಲಿ 20 ಕೇಂದ್ರಗಳನ್ನು ಸೂಕ್ಷ್ಮ, 10 ಅತೀ ಸೂಕ್ಷ್ಮ ಕೇಂದ್ರಗಳೆಂದು ಗುರುತಿಸಲಾಗಿದೆ.
ಎಲ್ಲೆಲ್ಲಿ ಎಷ್ಟೆಷ್ಟು ಪರೀಕ್ಷಾ ಕೇಂದ್ರ?: ರಾಯಚೂರಿನಲ್ಲಿ 27 ಕೇಂದ್ರಗಳು, ದೇವದುರ್ಗ-8, ಲಿಂಗಸ್ಗೂರು-12,ಸಿಂಧನೂರು-15 ಹಾಗೂ ಮಾನವಿಯಲ್ಲಿ 13 ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪರೀಕ್ಷೆ ಕೇಂದ್ರದ ಸುತ್ತಲಿನ ಪ್ರದೇಶದಲ್ಲಿ ನಕಲು ತಡೆಗೆ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ಕೇಂದ್ರದ ಸುತ್ತಲೂ 200 ಮೀ ವ್ಯಾಪ್ತಿಯಲ್ಲಿ ಪರೀಕ್ಷೆ ಸಮಯದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ಸಮಯದಲ್ಲಿ ಮುಚ್ಚಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಜಿಲ್ಲಾ ಮಟ್ಟದಲ್ಲಿ ಮೂರು ಶಿಕ್ಷಣ ಇಲಾಖೆಯ ತಂಡಗಳಲ್ಲದೇ ವಿವಿಧ ಇಲಾಖೆಗಳ 14 ಜಿಲ್ಲಾ ವಿಚಕ್ಷಣ ದಳಗಳನ್ನೂ ರಚಿಸಲಾಗಿದೆ. ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಂತೆ ಯಾದಗಿರಿಯಿಂದ 8 ಜನರ ತಂಡ ಹಾಗೂ ಗುಲ್ಬರ್ಗ ಆಯುಕ್ತರ ಕಚೇರಿ ಸೂಚನೆಯಂತೆ 3 ಜನರ ಸಂಚಾರಿ ಜಾಗೃತ ದಳದ ಒಂದು ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರತ್ಯೇತ ಜಾಗೃತ ದಳ: ತಾಲೂಕು ಮಟ್ಟದಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ತಹಸೀಲ್ದಾರರು, ತಾಪಂ ಇಒಗಳು, ಬಿಇಒಗಳು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರತ್ಯೇಕ ಜಾಗೃತ ದಳದ ತಂಡ ರಚಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಒಬ್ಬರು ಸ್ಥಳದಲ್ಲಿಯೇ ಕಾರ್ಯನಿರ್ವಹಿಸಲು ಸ್ಥಾನಿಕ ಜಾಗೃತ ದಳ ಅಧಿಕಾರಿಯನ್ನು ನೇಮಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾದರೆ ಅಂಥವರಿಗೆ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗಳನ್ನು ಜಿಲ್ಲೆಯಲ್ಲಿ ಶಾಂತಿಯುತ, ಸುವ್ಯವಸ್ಥೆ ಮತ್ತು ಸುಗಮವಾಗಿ ನಡೆಸಲು ಅಗತ್ಯವಾಗಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಿಡಿಪಿಐ ಪರಮೇಶ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

