ಕೆಜೆಪಿಗೆ ನೇಮಕ
ರಾಯಚೂರು: ಕರ್ನಾಟಕ ಜನತಾ ಪಾರ್ಟಿಯ ವಿವಿಧ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಕೆಜೆಪಿ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ಶಿವಕುಮಾರ್ ಪೊಲೀಸ್ ಪಾಟೀಲ್ ಅವರನ್ನು ನೇಮಿಸಿ ಯುವ ಘಟಕದ ರಾಜ್ಯಾಧ್ಯಕ್ಷ ಜಗದೀಶ್ ಹಿರೇಮನಿ ಆದೇಶ ಹೊರಡಿಸಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ವೆಂಕನಗೌಡ ಮಲ್ಕಾಪುರ್ ಅವರನ್ನು ನೇಮಿಸಲಾಗಿದೆ. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಶಿರಾಜ್ ಮಸ್ಕಿ ಅವರನ್ನು ನೇಮಿಸಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಗೋಖಲೆ ಈ ಕುರಿತು ಆದೇಶ ಹೊರಡಿಸಿದ್ದಾರೆ.
4ರ ಗಡುವು
ರಾಯಚೂರು: ರಾಯಚೂರು ನಗರ ವಿಧಾನಸಭೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರು ಹೊಂದಿರುವವರು ಏ.4ರೊಳಗೆ ಫಾರ್ಮ್ 7 ಸಲ್ಲಿಸುವ ಮೂಲಕ ಹೆಸರು ತೆಗೆಸಲು ಸೂಚಿಸಲಾಗಿದೆ. ಈ ಕುರಿತು ಸಹಾಯಕ ಆಯುಕ್ತೆ ಮಂಜುಶ್ರೀ ಅವರು ಸೂಚನೆ ನೀಡಿದ್ದು, ಮತದಾರರ ಪಟ್ಟಿಯಲ್ಲಿ ಎರಡನೇ ಹೆಸರು ತೆಗೆದು ಹಾಕಲು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

