ರಾಯಚೂರು

ಸಮರ್ಥ ನಾಯಕರ ಆಯ್ಕೆ ಅಗತ್ಯ

Published On :

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅರ್ಹತೆಯುಳ್ಳ ಪ್ರತಿಯೊಬ್ಬರೂ ಮತದಾನದ ಹಕ್ಕು ಹೊಂದಿದ್ದು, ಚುನಾವಣೆಯಲ್ಲಿ ಮತದಾರರು ಶಿಕ್ಷಣ, ನೀರಾವರಿ, ರಸ್ತೆ, ಕುಡಿವ ನೀರು, ತಾಂತ್ರಿಕ ಕಾಲೇಜು ಸ್ಥಾಪನೆ, ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ, ಬಸ್ ಸೌಕರ್ಯ ಸೇರಿ ಮೂಲ ಸೌಲಭ್ಯ ಕಲ್ಪಿಸುವ ಒಬ್ಬ ಸಮರ್ಥ ನಾಯಕ ನಮಗೆ ಅವಶ್ಯಕತೆ ಇದೆ. ಚುನಾವಣೆ ಸಂದರ್ಭದಲ್ಲಿ ಮತದಾನ ಮಾಡಲು ಹಣ, ಹೆಂಡಕ್ಕೆ ಆಸೆ ಪಡದೆ ಮತದಾರರು ಪ್ರಾಮಾಣಿಕರಾಗಿ ಒಬ್ಬ ಪ್ರಾಮಾಣಿಕ ವ್ಯಕ್ತಿಯ ಆಯ್ಕೆಗೆ ಮಹತ್ವ ನೀಡುವುದು ಸೂಕ್ತ.
- ಎಸ್.ರಂಗನಾಥ ಹಟ್ಟಿ, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ, ಲಿಂಗಸ್ಗೂರು.
ಇಂದು ಸಿಂಧನೂರಿಗೆ ಅಜರುದ್ದಿನ್, ರಮ್ಯಾ
ಸಿಂಧನೂರು: ಸಿಂಧನೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಂಪನಗೌಡ ಬಾದರ್ಲಿ ಪರ ಚುನಾವಣಾ ಪ್ರಚಾರಾರ್ಥವಾಗಿ ಖ್ಯಾತ ಕ್ರಿಕೆಟ್ ಆಟಗಾರ, ಮಾಜಿ ಸಂಸದ ಅಜರುದ್ದೀನ್, ನಟಿ ರಮ್ಯಾ ಹಾಗೂ ಯುವ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ರಿಜ್ವಾನ್ ಹರ್ಷದ್ ಮೇ 2ರಂದು ಆಗಮಿಸಲಿದ್ದಾರೆ. ಈ ಬಗ್ಗೆ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಘಟಕದ ಜಿಲ್ಲಾಧ್ಯಕ್ಷ ಬಸನಗೌಡ ಬಾದರ್ಲಿ, ನಗರಯುವ ಘಟಕದ ಅಧ್ಯಕ್ಷ ಮುರ್ತುಜಾ ಹುಸೇನ ತಿಳಿಸಿದ್ದಾರೆ. ನಗರದ ಬಪ್ಪೂರ ರಸ್ತೆಯ ಡಾ.ತಿಮ್ಮನಗೌಡ ಪ್ರೌಢಶಾಲೆ ಆವರಣ, ಮಹಿಬೂಬಿಯಾ ಕಾಲೋನಿ, ಖದಿರಿಯಾ ಕಾಲೋನಿಗಳಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಗ್ರಂಥಾಲಯಾಧಿಕಾರಿ ವಿರುದ್ಧ  ದೂರು
ರಾಯಚೂರು: ಜಿಲ್ಲಾ ಗ್ರಂಥಾಲಯ ಅಧಿಕಾರಿಯು ರಾಯಚೂರು ಗ್ರಾಮೀಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಹಣ ಹಂಚಿಕೆ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಜಿಲ್ಲಾಧಿಕಾರಿಗೆ ದೂರಲಾಗಿದೆ ಎಂದು ಜೆಡಿಎಸ್ ಮುಖಂಡ ವಿರೂಪಾಕ್ಷಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಗ್ರಂಥಾಲಯಾಧಿಕಾರಿ ರೆಬಿನಾಳ್ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತಿಪ್ಪರಾಜು ಪರ ಮತದಾರರಿಗೆ ಹಣ ಹಂಚಿಕೆ ಕಾರ್ಯಕ್ಕೆ ನೆರವಾಗುತ್ತಿದ್ದಾರೆ. ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಇಂದು ಬಹಿರಂಗ ಪ್ರಚಾರ ಸಭೆ
ಮಸ್ಕಿ: ಮೇ 2ರಂದು ಮಧ್ಯಾಹ್ನ 2.30ಕ್ಕೆ ಬಳಗಾನೂರು ಗ್ರಾಮದಲ್ಲಿ ಹಾಗೂ ಸಂಜೆ 5.30ಕ್ಕೆ ಮಸ್ಕಿ ಪಟ್ಟಣದಲ್ಲಿ ಪಕ್ಷದ ಬಹಿರಂಗ ಪ್ರಚಾರ ಸಭೆ ಏರ್ಪಡಿಸಲಾಗಿದೆ ಎಂದು ಬಿಜೆಪಿ ಮಸ್ಕಿ ಬ್ಲಾಕ್ ಅಧ್ಯಕ್ಷ ಮಲ್ಲಪ್ಪ ಚಿತಾಪೂರ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.