ರಾಯಚೂರು

ಕಾಂಗ್ರೆಸ್‌ಗೆ ಗೆಲವು: ಇಟಗಿ

Published On :

ದೇವದುರ್ಗ: ಜಿಲ್ಲೆಯ 7 ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥ್‌ಗಳು ಆಯ್ಕೆಯಾಗುವುದು ಖಚಿತ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಎಂಎಲ್ಸಿ ಬಸವರಾಜ ಪಾಟೀಲ್ ಇಟಗಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರ ಅಲೆಯಿದ್ದು, ಜಿಲ್ಲೆಯಲ್ಲಿ ಕೂಡಾ ಮತದಾರರು ಕಾಂಗ್ರೆಸ್‌ನೆಡೆ ಒಲವು ತೋರುತ್ತಿದ್ದಾರೆ ಎಂದರು.
ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತ ಜನರು ಈ ಬಾರಿ ಕಾಂಗ್ರೆಸ್ ಪರ ಒಲವು ತೋರಿದ್ದಾರೆ. ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಶಿವನಗೌಡ ನಾಯಕ, ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರು. ದೊರೆತಿದೆ ಎಂದು ಹೇಳುತ್ತಲೇ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆಂದರು.
ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ. ವೆಂಕಟೇಶ ನಾಯಕ, ಸರಳ-ಸಜ್ಜನ ರಾಜಕಾರಣಿಯಾಗಿದ್ದು, ಚುನಾವಣೆಯಲ್ಲಿ ಭಾರೀ ಬಹುಮತದಿಂದ ಆಯ್ಕೆಯಾಗುತ್ತಾರೆಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡ ಅಮರೇಗೌಡ ಹಂಚಿನಾಳ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಮಲ್ಲಣ್ಣಗೌಡ ಗುಂಡಗುರ್ತಿ, ಕಾಂಗ್ರೆಸ್ ಮುಖಂಡರಾದ ಹನುಮರಡ್ಡೆಪ್ಪ ಮಿಯ್ಯಾಪುರ, ಬಾಲಪ್ಪ ನಾಯಕ ಮರಡಿ, ಡಾ. ಜಗದೀಶ್ ರಾಯಚೂರು, ಸಿದ್ರಾಮರಡ್ಡೆ ಅಂಚೆಸೂಗೂರು, ವೆಂಕಟೇಶ ನಾಯಕ ಜೆ.ಜಾಡ್ಲದಿನ್ನಿ, ಲೋಕಪ್ಪ ನಾಯ್ಕ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.