ಮಾದಿಗರ ಕಡೆಗಣಿಸಿದವರಿಗೆ ಚುನಾವಣೆಯಲ್ಲಿ ಪಾಠ ಕಲಿಸಿ
ರಾಯಚೂರು: ಪ್ರಸಕ್ತ ಚುನಾವಣೆಯಲ್ಲಿ ಮಾದಿಗ ಜನಾಂಗಕ್ಕೆ ಟಿಕೆಟ್ ನಿರಾಕರಿಸಿದ ಪಕ್ಷ ಹಾಗೂ ಸದಾಶಿವ ಆಯೋಗದ ಶಿಫಾರಸು ಜಾರಿಯಲ್ಲಿ ವಿಳಂಬ ಮಾಡಿದವರಿಗೆ ಪ್ರಸಕ್ತ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವಂತೆ ಮಾದಿಗ ಮತದಾರರ ವೇದಿಕೆ ಮನವಿ ಮಾಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ವೇದಿಕೆಯ ಅಧ್ಯಕ್ಷ ರಾಜು ವಕೀಲರು, ಶೈಕ್ಷಣಿಕ, ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿ ಮಾದಿಗ ಮತ್ತು ಛಲವಾದಿ ಸಮಾಜದವರನ್ನು ಕಡೆಗಣಿಸಲಾಗಿದೆ. ಸದಾಶಿವ ಆಯೋಗದ ಶಿಫಾರಸಿನಂತೆ ಮೀಸಲಾತಿ ಕಲ್ಪಿಸಲು ಸ್ಪೃಶ್ಯ ಜಾತಿಗಳ ರಾಜಕೀಯ ನಾಯಕರು ವಿರೋಧಿಸಿದ್ದು, ಮಾದಿಗರು ಹಾಗೂ ಛಲವಾದಿಗಳು ಪ್ರಸಕ್ತ ಚುನಾವಣೆಯಲ್ಲಿ ಈ ನಿಟ್ಟಿನಲ್ಲಿ ವಿರೋಧಿಸಿದವರನ್ನು ವಿರೋಧಿಸುವಂತೆ ಮನವಿ ಮಾಡಿದ್ದಾರೆ.
ರಾಯಚೂರು ನಗರದಲ್ಲಿ 2012ರ ಆಗಸ್ಟ್ನಲ್ಲಿ ಹೈ.ಕ.ಭಾಗದ ಪ್ರದೇಶ ಮಾದಿಗ ಛಲವಾದಿ ಸಮಾಜದವರ ಬೃಹತ್ ಸಮಾವೇಶ ಆಯೋಜಿಸಿ ಸದಾಶಿವ ಆಯೋಗದ ಶಿಫಾರಸು ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿರುವ ಅವರು, ಲಿಂಗಸ್ಗೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅಸ್ಪೃಶ್ಯ ವರ್ಗದ ಪಾಮಯ್ಯ ಮುರಾರಿಯವರಿಗೆ ಕಾಂಗ್ರೆಸ್ ಟಿಕೆಟ್ ಅಂತಿಮ ಹಂತದಲ್ಲಿ ನಿರಾಕರಿಸಿ, ಎಸ್ಸಿಗಳಲ್ಲೇ ಸ್ಪೃಶ್ಯ ಜನಾಂಗಕ್ಕೆ ಸೇರಿದ ಉದ್ಯಮಿ ಡಿ.ಎಸ್. ಹೂಲಗೇರಿ ಅವರಿಗೆ ಟಿಕೆಟ್ ನೀಡಿದ್ದು ಸಮುದಾಯಕ್ಕೆ ಅವಮಾನ ಮಾಡಿದೆ ಎಂದು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಮಾದಿಗ ಮತ್ತು ಛಲವಾದಿಗಳನ್ನು ಅವಕಾಶ ನೀಡದೇ ಕಡೆಗಣಿಸಿರುವ ಪಕ್ಷಗಳಿಗೆ ಪ್ರಸಕ್ತ ಚುನಾವಣೆಯಲ್ಲಿ ವಿರೋಧಿಸುವಂತೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

