ರಾಯಚೂರು

ನಗರಸಭೆ ಕಾರ್ಮಿಕನ ಅನುಮಾನಾಸ್ಪದ ಸಾವು; ಸಂಘದ ಆಕ್ರೋಶ

Published On :

ರಾಯಚೂರು: ನಗರಸಭೆಯ ಕಾರ್ಮಿಕನೊಬ್ಬ ಕರ್ತವ್ಯದಲ್ಲಿದ್ದಾಗ ತುಂಗಭದ್ರಾ ಎಡದಂಡೆ ಕಾಲುವೆಯ 96ನೇ ವಿತರಣೆ ಕಾಲುವೆಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ಕಾರ್ಮಿಕನನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಈತನನ್ನು ಕಳೆದ ಕೆಲ ದಿನಗಳಿಂದ ಗಣೇಕಲ್ ಜಲಾಶಯದಲ್ಲಿ ನೀರಿನ ಭರ್ತಿ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಆದರೆ ಆತನ ಶವವು ಮೂರು ದಿನಗಳ ನಂತರ ಕಾಲುವೆಯಲ್ಲಿ ಪತ್ತೆಯಾಗಿದ್ದು, ಅನುಮಾನಕ್ಕೆ ದಾರಿ ಮಾಡಿದೆ.
ಆಕ್ರೋಶ; ನಗರಸಭೆಯ ಕಾರ್ಮಿಕ ವೆಂಕಟೇಶ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ನಗರಸಭೆಯ ದಿನಗೂಲಿ ನೌಕರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಕಾರ್ಮಿಕನ ಸಾವು ಸಂಭವಿಸಿದೆ ಎಂದು ಆರೋಪಿಸಿದರು.
2002ರಿಂದ ಸ್ಥಳೀಯ ನಗರಸಭೆಯಲ್ಲಿ ವೆಂಕಟೇಶ್ ಕಾರ್ಯನಿರ್ವಹಿಸುತ್ತಿದ್ದು, ಕಳೆದೊಂದು ವಾರದಿಂದ ಗಣೇಕಲ್ ಜಲಾಶಯದ ಬಳಿ ಕುಡಿಯುವ ನೀರಿನ ಸರಬರಾಜು ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಮೌಖಿಕವಾಗಿ ಆಯೋಜಿಸಿದ್ದ ಅಧಿಕಾರಿಗಳ ನಂತರದಲ್ಲಿ ಅವರ ಸಾವು ಸಂಭವಿಸಿದ್ದರೂ ನಿರ್ಲಕ್ಷ್ಯ ತಾಳಿದ್ದಾರೆಂದು ದೂರಿದರು.
ಅನುಮಾನ: ಕಳೆದ ಮೂರು ದಿನಗಳ ಹಿಂದೆಯೇ ವೆಂಕಟೇಶ್ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವುದು ಅನುಮಾನಕ್ಕೆ ದಾರಿ ಮಾಡಿದ್ದು ನಗರಸಭೆ ಅಧಿಕಾರಿಗಳ ಗಮನಕ್ಕೆ ಈ ವಿಚಾರ ಬಂದಿಲ್ಲ. ಇದು ಅಧಿಕಾರಿಗಳ ಕಾರ್ಯವೈಖರಿಗೆ ಸಾಕ್ಷಿಯಾಗಿದೆ. ಕೂಡಲೇ ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ನೌಕರನ ಸಾವಿಗೆ ಕಾರಣರಾದವರನ್ನು ಕೂಡಲೇ ಅಮಾನತುಗೊಳಿಸಬೇಕು. ಮೃತನ ಕುಟುಂಬದವರಿಗೆ ರು. 10 ಲಕ್ಷ ಪರಿಹಾರ ನೀಡಬೇಕು. ಮೃತನ ಸಂಬಂಧಿಗೆ ಪರಿಹಾರವಾಗಿ ಉದ್ಯೋಗ ನೀಡುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.