ಪಿಎಚ್ಸಿಗಳಲ್ಲಿ ಮತದಾನ ಜಾಗೃತಿ
ಗುಲ್ಬರ್ಗ: ನಗರ ಪ್ರದೇಶದಲ್ಲಿ ಶೇ.40ಕ್ಕಿಂತ ಕಡಿಮೆ ಮತದಾನವಾದ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಮತದಾನ ಹೆಚ್ಚಿಸುವ ನಿಟ್ಟಿನಲ್ಲಿ ನಗರದ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಮತದಾರರ ಜಾಗಣತಿ ಜಾಥಾಗಳನ್ನು ಗುರುವಾರದಂದು ಹಮ್ಮಿಕೊಳ್ಳಲಾಯಿತು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷೆ ಪಲ್ಲವಿ ಆಕುರಾತಿ ಅವರು ನ್ಯೂ ರಹೆಮತ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ನ್ಯೂ ರಹೆಮತ್ ನಗರದ ಮಹಿಳಾ ಮತದಾರರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಈ ಜಾಥಾ ನ್ಯೂ ರಹೆಮತ್ ನಗರದ ಗಲ್ಲಿ ಗಲ್ಲಿಗಳಲ್ಲಿ ಘೋಷಣಾ ವಾಕ್ಯಗಳನ್ನು ಘೋಷಿಸುತ್ತ ಸಾಗಿತು. ಇದೇ ವೇಳೆ ಗಾಂಧೀಜಿಯ ಮೂರು ಮಂಗಗಳು ಸಾರುವ ಸಂದೇಶದ ಕಿರು ಪ್ರದರ್ಶನವನ್ನು ಕೈಗೊಳ್ಳಲಾಯಿತು. ಕೊನೆಯಲ್ಲಿ ಉರ್ದು ಭಾಷೆಯಲ್ಲಿ ಕಡ್ಡಾಯ ಮತದಾನ ಮಾಡುವ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರತ್ನಾ ಬಿ. ಕಲಂದಾನಿ, ತಾಲೂಕು ಆರೋಗ್ಯಾಧಿಕಾರಿ ಡಾ. ಶಿವಶರಣಪ್ಪ, ವೈದ್ಯಾಧಿಕಾರಿ ಡಾ. ಶರಣಬಸಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಣ್ಣ, ಮೇಲ್ವಿಚಾರಕಿಯರಾದ ದೀಪಾ, ಮಂಜುಳಾ ಮತ್ತಿತರರು ಪಾಲ್ಗೊಂಡಿದ್ದರು. ಶಿವಾಜಿನಗರ, ಮಾಣಿಕೇಶ್ವರಿ ನಗರ, ಹೀರಾಪುರ, ಮಕ್ತಂಪುರ, ಸೇಂಟ್ ಜಾನ್ ಆ್ಯಂಬುಲನ್ಸ್, ಖಾನಾಪುರ, ತಾರಫೈಲ್, ಅಶೋಕನಗರ, ಶಹಾಬಜಾರಗಳ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಮತದಾರರ ಜಾಗೃತಿ ಜಾಥಾವನ್ನು ಏಕಕಾಲದಲ್ಲಿ ಹಮ್ಮಿಕೊಳ್ಳಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

