ಮತಗಟ್ಟೆಗಳತ್ತ ಸಿಬ್ಬಂದಿ
ಕನ್ನಡಪ್ರಭವಾರ್ತೆ, ಲಿಂಗಸ್ಗೂರು, ಮೇ 4
ರಾಜ್ಯದಲ್ಲಿ ಹದಿನಾಲ್ಕನೇ ವಿಧಾನಸಭೆ ರಚನೆಗೆ ಮೇ 5ರಂದು ಮತದಾನ ನಡೆಯಲಿದ್ದು, ಕ್ಷೇತ್ರ ಪುನರ್ವಿಂಗಡಣೆ ನಂತರ ಎರಡನೇ ವಿಧಾನಸಭೆ ಚುನಾವಣೆ ಇದಾಗಿದೆ. ಲಿಂಗಸ್ಗೂರು ಮತ್ತು ಮಸ್ಕಿ ಕ್ಷೇತ್ರಗಳ ಚುನಾವಣಾಧಿಕಾರಿಗಳು ಶಾಂತಿಯುತ ಹಾಗೂ ಮುಕ್ತ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಚುನಾವಣೆ ಕರ್ತವ್ಯಕ್ಕೆ ನೇಮಕಗೊಂಡ ಸಿಬ್ಬಂದಿಯನ್ನು ಶನಿವಾರ ಆಯಾ ಮತಗಟ್ಟೆ ಕೇಂದ್ರಗಳಿಗೆ ಕಳುಹಿಸಿಕೊಡಲಾಯಿತು.
ಲಿಂಗಸ್ಗೂರು ಕ್ಷೇತ್ರ: ಲಿಂಗಸ್ಗೂರು ವಿಧಾನಸಭೆ ಕ್ಷೇತ್ರದಲ್ಲಿ ಪುರುಷರು 1,00,866 ಮತ್ತು ಮಹಿಳೆಯರು 96,934 ಸೇರಿ ಒಟ್ಟು 1,97,809 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಸುಗಮ ಮತದಾನಕ್ಕೆ ಒಟ್ಟು 236 ಮತಗಟ್ಟೆ ಕೇಂದ್ರಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಲ್ಲಿ 104 ಸಾಮಾನ್ಯ, 83 ಸೂಕ್ಷ್ಮ, 49 ಅತಿಸೂಕ್ಷ್ಮ ಕೇಂದ್ರಗಳೆಂದು ಗುರುತಿಸಲಾಗಿದೆ. ಚುನಾವಣೆ ಕರ್ತವ್ಯಕ್ಕೆ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿಗಳು ಹಾಗೂ ಡಿ ದರ್ಜೆ ನೌಕರರು ಸೇರಿದಂತೆ ಒಟ್ಟು 1420 ಪೋಲಿಂಗ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ ಸಿಬ್ಬಂದಿ ಆಯಾ ಮತಗಟ್ಟೆ ಕೇಂದ್ರಗಳಿಗೆ ಕರೆದೊಯ್ಯಲು 31 ಸರ್ಕಾರಿ ಬಸ್, 11 ಮಿನಿ ಬಸ್, 14 ಮ್ಯಾಕ್ಸಿ ಕ್ಯಾಬ್ ಹಾಗೂ 5 ಜೀಪ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಚುನಾವಣಾಧಿಕಾರಿ ಟಿ.ಯೋಗೇಶ್ ತಿಳಿಸಿದ್ದಾರೆ.
ಮಸ್ಕಿ ಕ್ಷೇತ್ರ: ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಪುರುಷರು 82,602 ಹಾಗೂ ಮಹಿಳೆಯರು 82,270 ಸೇರಿ ಒಟ್ಟು 1,64,885 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಸುಗಮ ಮತದಾನಕ್ಕೆ ಒಟ್ಟು 204 ಮತಗಟ್ಟೆ ಕೇಂದ್ರಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಲ್ಲಿ 124 ಸಾಮಾನ್ಯ, 85 ಸೂಕ್ಷ್ಮ, 79 ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಒಟ್ಟು 1200 ಪೋಲಿಂಗ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ ಸಿಬ್ಬಂದಿಯನ್ನು ಆಯಾ ಮತಗಟ್ಟೆ ಕೇಂದ್ರಗಳಿಗೆ ಕರೆದೊಯ್ಯಲು 28 ಸರ್ಕಾರಿ ಬಸ್, 11 ಮಿನಿ ಬಸ್, 11 ಜೀಪ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಚುನಾವಣಾಧಿಕಾರಿ ವೈ.ಬಿ. ಶ್ರೀನಿವಾಸ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

