ಮಾನವಿ; ಮತಯಂತ್ರ ದೋಷ ಒಂದೂವರೆ ತಾಸು ಮತದಾನ ವಿಳಂಬ
ಕ.ಪ್ರ. ವಾರ್ತೆ, ರಾಯಚೂರು, ಮೇ 5
ಮಾನವಿ ವಿಧಾನಸಭೆ ಕ್ಷೇತ್ರದಲ್ಲಿ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಉಳಿದಂತೆ ಒಟ್ಟಾರೆ ಮತದಾನ ಶಾಂತಿಯುತವಾಗಿ ಪೂರ್ಣಗೊಂಡಿದ್ದು ಒಟ್ಟು ಶೇ.62.53ರಷ್ಟು ಮತದಾನವಾಗಿದೆ.
ಮಾನವಿ ತಾಲೂಕಿನ ಉದ್ಭಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತಯಂತ್ರದಲ್ಲಿ ದೋಷ ಕಂಡುಬಂದಿದ್ದರಿಂದ ಒಂದೂವರೆ ತಾಸು ಮತದಾನ ಬೆಳಗ್ಗೆ ತಡವಾಯಿತು. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮತಯಂತ್ರ ಸರಿಪಡಿಸಿದ ನಂತರ ಮತದಾನ ಮತ್ತೆ ಆರಂಭವಾಯಿತು.
ಮಾನವಿ ಪಟ್ಟಣ ಸೇರಿದಂತೆ ಕ್ಷೇತ್ರದ ವ್ಯಾಪ್ತಿಯ ಎಲ್ಲೆಡೆ ಭಾನುವಾರ ಬೆಳಗ್ಗೆ 7ರಿಂದಲೇ ಮತದಾರರು ಮತಗಟ್ಟೆಗಳ ಮುಂದೆ ಸಾಲಾಗಿ ನಿಂತು ಮತದಾನ ಮಾಡಿದರು. ಬಿರುಬಿಸಿಲ ಹಿನ್ನೆಲೆಯಲ್ಲಿ ಮಧ್ಯಾಹ್ನದ ವೇಳೆ ಮತದಾನ ಮಂದವಾಗಿದ್ದು ಆನಂತರದಲ್ಲಿ ಮತ್ತೆ ಚುರುಕು ಪಡೆಯಿತು.
ಹೆಸರು ನಾಪತ್ತೆ: ಮಾನವಿ ತಾಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿ 2500 ಮತದಾರರಿದ್ದು, ಅದರಲ್ಲಿ 280 ಜನರ ಹೆಸರು ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದ್ದು, ಮತದಾರರಲ್ಲಿ ಬೇಸರಕ್ಕೆ ಕಾರಣವಾಯಿತು. ಅದೇ ರೀತಿ ಹೀರಾ ಚಿಂಚರಿಕಿ ಗ್ರಾಮದಲ್ಲಿ ಸಹ 150 ಮತದಾರರ ಹೆಸರು ಮತಪಟ್ಟಿಯಿಂದ ನಾಪತ್ತೆಯಾದ ಬಗ್ಗೆ ದೂರು ಕೇಳಿಬಂದಿತು. ಒಟ್ಟಿನಲ್ಲಿ ಮಾನವಿ ವಿಧಾನಸಭೆ ಕ್ಷೇತ್ರದಾದ್ಯಂತ ಮತದಾನ ಶಾಂತಿಯುತವಾಗಿ ನಡೆಯಿತು. ಪೊಲೀಸ್, ಕೇಂದ್ರ ಮೀಸಲು ಪಡೆಯ ಸಿಬ್ಬಂದಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

