ಇಂದು ಮತ ಎಣಿಕೆ: ಅಭ್ಯರ್ಥಿಗಳ ಪರ ಬೆಟ್ಟಿಂಗ್
ದೇವದುರ್ಗ: ದೇವದುರ್ಗ ವಿಧಾನಸಭೆ ಕ್ಷೇತ್ರದ ಮತದಾನ ಶಾಂತಿಯುತವಾಗಿ ಮುಗಿದಿದ್ದು, ಸದ್ಯ ಮೇ 8ರಂದು ನಡೆಯಲಿರುವ ಮತಗಳ ಎಣಿಕೆ ಕಾರ್ಯದತ್ತ ಎಲ್ಲರ ಗಮನ ನೆಟ್ಟಿದ್ದು, ರಾಜಕೀಯ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಪರ ಬೆಟ್ಟಿಂಗ್ಗೆ ಮುಂದಾಗಿದ್ದಾರೆ.
ಜಿಲ್ಲೆಯಲ್ಲಿಯೇ ಪ್ರಮುಖ ಜಿದ್ದಾಜಿದ್ದಿ ಕಣವಾಗಿರುವ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆಯೇ ನೇರ ಹಣಾಹಣಿಯಿದ್ದು ವಿಜಯಲಕ್ಷ್ಮಿ ಯಾರ ಪರ ಒಲಿಯುತ್ತಾಳೆಂಬ ರಾಜಕೀಯ ಲೆಕ್ಕಾಚಾರ ಕ್ಷೇತ್ರದಾದ್ಯಂತ ಆರಂಭಗೊಂಡಿದೆ. ಕಾರ್ಯಕರ್ತರು ಗೆಲವಿನ ಬಗ್ಗೆ ಬೆಟ್ಟಿಂಗ್ನಲ್ಲಿ ತೊಡಗಿದ್ದಾರೆ.
ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳೇ ಆಯ್ಕೆಯಾಗುವುದು ಖಚಿತ ಎಂದು ಮತದಾನದ ದಿನವೇ ಸಂಜೆ ಮತ ಎಣಿಕೆಗೂ ಮುನ್ನವೇ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. 2008ರ ಚುನಾವಣೆಯಂತೆ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಗೆದ್ದೇ ತೀರುತ್ತಾರೆಂದು ಅವರ ಬೆಂಬಲಿಗರು ಬೆಟ್ಟಿಂಗ್ನಲ್ಲಿ ತೊಡಗಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಂಸದ ವೆಂಕಟೇಶ ನಾಯಕ ಪರ ಅವರ ಬೆಂಬಲಿಗರು ಬೆಟ್ಟಿಂಗ್ ನಲ್ಲಿ ತೊಡಗಿದ್ದಾರೆ. ಕ್ಷೇತ್ರದಲ್ಲಿ ಮತಗಳ ಎಣಿಕೆ ದಿನ ಸಮೀಪಿಸುತ್ತಿದ್ದಂತೆಯೇ ಸೋಲು ಗೆಲವಿನ ಲೆಕ್ಕಾಚಾರ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

