ರಾಯಚೂರು

ಮತ ಎಣಿಕೆ: ಮೊಬೈಲ್, ಕ್ಯಾಮೆರಾ, ಲ್ಯಾಪ್‌ಟಾಪ್ ನಿಷೇಧ

Published On :

ರಾಯಚೂರು: ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳಿಗೆ ಈಚೆಗೆ ನಡೆದ ಮತದಾನದ ಮತ ಎಣಿಕೆಯ ಕಾರ್ಯ ನಗರದಲ್ಲಿ ಮೇ 8ರಂದು ನಡೆಯಲಿದ್ದು ಮತ ಎಣಿಕೆ ಕೇಂದ್ರದೊಳಕ್ಕೆ ಮೊಬೈಲ್ ಸೇರಿದಂತೆ ವಿವಿಧ ಸಾಮಗ್ರಿ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಉಜ್ವಲ್‌ಕುಮಾರ್ ಘೋಷ್ ಆದೇಶ ಹೊರಡಿಸಿದ್ದು,  ಮೇ 8ರಂದು  ನಗರದ ಎಲ್.ವಿ.ಡಿ. ಕಾಲೇಜು ಹಾಗೂ ಎಸ್.ಆರ್.ಪಿ.ಎಸ್ ಕಾಲೇಜಿನಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಮತ ಎಣಿಕೆಗಾಗಿ ನಿಯುಕ್ತಿಗೊಂಡ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮತ್ತಿತರರು ಎಣಿಕೆ ಕೇಂದ್ರದಲ್ಲಿ ವಿದ್ಯುನ್ಮಾನ ಉಪಕರಣಗಳಾದ ಮೊಬೈಲ್ ಫೋನ್, ಕ್ಯಾಮೆರಾ, ಲ್ಯಾಪ್‌ಟಾಪ್ ಮತ್ತಿತರೆ ಸಾಮಗ್ರಿ ಕೊಂಡೊಯ್ಯದಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.