ರಾಯಚೂರು

ಜೆಡಿಎಸ್‌ನ ವಜ್ಜಲ್ ಜಯಭೇರಿ

Published On :

ಲಿಂಗಸ್ಗೂರು: ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಲಿಂಗಸ್ಗೂರು ಮೀಸಲು ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಮಾನಪ್ಪ ವಜ್ಜಲ್ ಆಯ್ಕೆಯಾಗುವ ಮೂಲಕ ಸತತ ಎರಡನೇ ಬಾರಿ ಗೆಲವು ಸಾಧಿಸಿದ್ದಾರೆ.
ರಾಜ್ಯಾದ್ಯಂತ ಕಾಂಗ್ರೆಸ್ ಪರ ವಾತಾವರಣ ನಿರ್ಮಾಣಗೊಂಡಿದ್ದರೂ ಲಿಂಗಸ್ಗೂರು ಕ್ಷೇತ್ರದ ಮತದಾರರು ಜೆಡಿಎಸ್ ಕಡೆಗೆ ಒಲವು ತೋರಿದ್ದಾರೆ. ಕಳೆದ 2008 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಆಯ್ಕೆಗೊಂಡಿದ್ದ ಮಾನಪ್ಪ ವಜ್ಜಲರು, 2013ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಜಯ ಸಾಧಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾನಪ್ಪ ವಜ್ಜಲರು ಅತಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಗೊಂಡಿದ್ದರು. ಆರಂಭದಲ್ಲಿ ಬಿಜೆಪಿ ಪಕ್ಷ ಸಂಘಟನೆ ಜೊತೆಗೆ ಹಲವು ಅಭಿವೃದ್ಧಿ ಕಾರ್ಯ ಕೈಗೊಳ್ಳುವತ್ತ ಉತ್ಸುಕತೆ ತೋರಿದ್ದ ವಜ್ಜಲರು ನಂತರ ಭಿನ್ನಮತದ ಗುಂಪಿನೊಂದಿಗೆ ಗುರುತಿಸಿಕೊಂಡಿದ್ದರು. ಇತ್ತ ಮಾನಪ್ಪ ವಜ್ಜಲರ ಸಹೋದರ ನಾಗಪ್ಪ ವಜ್ಜಲರು ಜೆಡಿಎಸ್ ಪಕ್ಷ ಸೇರ್ಪಡೆಗೊಂಡು ಜಿಪಂ, ತಾಪಂ ಚುನಾವಣೆ ನಡೆಸಿದರು. ನಂತರ ಪುರಸಭೆ ಚುನಾವಣೆಯಲ್ಲಿ ಮಾನಪ್ಪ ವಜ್ಜಲರು ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ ಅವರ ಗೆಲವಿಗೆ ಶ್ರಮಿಸಿದ್ದರು. ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಮಾನಪ್ಪ ವಜ್ಜಲರು ಬಿಜೆಪಿ ತೊರೆದು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಆಯ್ಕೆಗೊಂಡಿದ್ದಾರೆ.
ಕಾಂಗ್ರೆಸ್ ಭಿನ್ನಮತ ವಜ್ಜಲರಿಗೆ ಶ್ರೀರಕ್ಷೆ: ಇತ್ತೀಚಿಗೆ ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿದ್ದ ಆಂತರಿಕ ಭಿನ್ನಮತ ಕ್ರಮೇಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಮೇಟಿ ಹಾಗೂ ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಮಧ್ಯೆ ಭಿನ್ನಮತ ತಾರತಕ್ಕೇರಿ ಕಾಂಗ್ರೆಸ್ ಅಭ್ಯರ್ಥಿ ಡಿ.ಎಸ್.ಹೂಲಗೇರಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಿತು. ಅಲ್ಲದೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಮೇಟಿ ಅವರ ಸಹೋದರ ಬಸಣ್ಣ ಮೇಟಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಪರಿಣಾಮ ವಜ್ಜಲರ ಗೆಲವಿಗೆ ಅನುಕೂಲ ಕಲ್ಪಿಸಿಕೊಟ್ಟಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.