ನೆನೆಗುದಿಗೆ ಬಿದ್ದ ಕೆಲಸಕ್ಕೆ ಪ್ರಥಮಾದ್ಯತೆ: ಬಾದರ್ಲಿ
ಸಿಂಧನೂರು: ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳು ತಲೆಯೆತ್ತಿದ್ದು, ಈ ಹಿಂದೆ ನೆನೆಗುದಿಗೆ ಬಿದ್ದ ಕೆಲಸಗಳನ್ನು ಪೂರ್ಣಗೊಳಿಸಲು ಪ್ರಥಮ ಆದ್ಯತೆ ನೀಡುವುದಾಗಿ ನೂತನ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ಅವರು ತಮ್ಮ ನಿವಾಸದಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಪೊಳ್ಳು ಭರವಸೆಗಳನ್ನು ನೀಡಿದ ಕೆಲ ರಾಜಕಾರಣಿಗಳಿಗೆ ಮತದಾರರು ತಕ್ಕಪಾಠ ಕಲಿಸಿದ್ದಾರೆ. ಎಲ್ಲಾ ಕಾರ್ಯಕರ್ತರ ಶ್ರಮದಾನ ಹಾಗೂ ಮತದಾರರ ಆಸಕ್ತಿಯೇ ನನ್ನ ಗೆಲವಿಗೆ ಕಾರಣವಾಗಿದೆ. ಕ್ಷೇತ್ರಕ್ಕೆ ಕುಡಿಯುವ ನೀರು, ಶೌಚಾಲಯ, ಟೇಲಂಡ್ ರೈತರ ಸಮಸ್ಯೆ ಮತ್ತಿತರ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಕಾರ್ಯಶೀಲನಾಗುತ್ತೇನೆಂದರು.
ಅಭಿವೃದ್ಧಿಯೇ ನನ್ನ ಮೊದಲನೇ ಗುರಿ, ಎಲ್ಲರ ಸಹಾಯ ಸಹಕಾರ ಪಡೆಯುವುದರ ಮೂಲಕ ಸಿಂಧನೂರನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಇಚ್ಚಿಸುತ್ತೇನೆ. ಜಿಲ್ಲೆಯಲ್ಲಿ ಸಚಿವ ಸ್ಥಾನ ಯಾರಿಗೆ ಕೊಡಬೇಕೆಂಬುವುದು ಹೈಕಮಾಂಡ್ಗೆ ಬಿಟ್ಟ ವಿಷಯ. ಯಾರಿಗೇ ಕೊಟ್ಟರೂ ಜಿಲ್ಲೆಯ ಅಭಿವೃದ್ಧಿಯತ್ತ ಗಮನಹರಿಸಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರಬೇಕೆಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

