ದೇಹದಾನ ನಿರ್ಧಾರ
ರಾಯಚೂರು: ನಗರದ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಶೋಧನೆ ಮತ್ತು ಅಧ್ಯಯನಕ್ಕೆ ಅನುಕೂಲವಾಗಲು ಮಾನವಿ ನಿವಾಸಿ ದೇವೀಂದ್ರ ಚಿಂಚೋಳಿ ಅವರು ತಮ್ಮ ಮರಣದ ನಂತರ ದೇಹದಾನದ ಪ್ರಮಾಣ ಪತ್ರ ಸಂಸ್ಥೆಗೆ ಹಸ್ತಾಂತರಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ತಮ್ಮ ಮರಣದ ನಂತರದಲ್ಲಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ದೇಹದಾನ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ರಾಯಚೂರು: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿರುವ ತೋಟಗಾರಿಕೆ ಇಲಾಖೆಯ ಕ್ಷೇತ್ರದಲ್ಲಿ ತೋಟಗಾರಿಕೆ ತರಬೇತಿಗೆ ಅರ್ಹರಿಂದ ಅರ್ಜಿ ಕರೆಯಲಾಗಿದೆ.ರಾಯಚೂರು ವ್ಯಾಪ್ತಿಯಲ್ಲಿನ ಮುನಿರಾಬಾದ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2013-14ನೇ ಸಾಲಿಗೆ ತೋಟಗಾರಿಕೆ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತರು ಅರ್ಜಿಗಳನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಉಪ ನಿರ್ದೇಶಕರು, ರಾಯಚೂರು ಇವರನ್ನು ಸಂಪರ್ಕಿಸಲು ಕೋರಲಾಗಿದೆ.
ದ್ವಿತೀಯ ಪಿಯು: ಉತ್ತಮ ಸಾಧನೆ
ರಾಯಚೂರು: ನಗರದ ಬಾಲಕಿಯರ ಪದವಿ ಪೂರ್ವ ಸರ್ಕಾರಿ ಕಾಲೇಜಿನ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ತಾಹೀರಬೇಗಂ ಈಚೆಗೆ ಮನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.ವಾರ್ತಾ ಇಲಾಖೆಯ ಸಿಬ್ಬಂದಿ ಎಂ.ಡಿ. ಸಲೀಂ ಪಾಷಾ ಅವರ ಪುತ್ರಿ ತಾಹೀರಬೇಗಂ. ಎಂ, ಅವರು 518 ಅಂಕಗಳನ್ನು ಪಡೆಯುವ ಮೂಲಕ ಉತ್ತೀರ್ಣರಾಗಿ ಗಮನಾರ್ಹ ಸಾಧನೆ ಮೆರೆದಿದ್ದಾರೆ.
ಆಕಸ್ಮಿಕ ಬೆಂಕಿ; ಅಪಾರ ಹಾನಿ
ರಾಯಚೂರು: ದೇವದುರ್ಗ ತಾಲೂಕಿನ ಕೋತಿಗುಡ್ಡ ಗ್ರಾಮದಲ್ಲಿ ಜೋಪಡಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ. ಗ್ರಾಮದ ನಿವಾಸಿ ಮರಿಲಿಂಗಪ್ಪ ಎಂಬುವವರಿಗೆ ಸೇರಿದ ಜೋಪಡಿಗೆ ಆಕಸ್ಮಿಕ ಬೆಂಕಿ ತಗುಲಿ ಅದರಲ್ಲಿದ್ದ ಆಹಾರ ಧಾನ್ಯ, ನಗದು, ಪಾತ್ರೆಗಳು ಸೇರಿದಂತೆ ಒಟ್ಟು 60 ಸಾವಿರ ಬೆಲೆಯ ಆಸ್ತಿಗೆ ಹಾನಿಯಾಗಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

