ರಾಯಚೂರು

ವಿದ್ಯುತ್ ಸ್ಪರ್ಶ: ಸಾವು

Published On :

ರಾಯಚೂರು: ದೇವದುರ್ಗ ತಾಲೂಕಿನ ಬಿ.ಗಣೇಕಲ್ ಗ್ರಾಮದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯ ಕೆಲಸದಲ್ಲಿದ್ದ ವ್ಯಕ್ತಿಗೆ ವಿದ್ಯುತ್ ತಗುಲಿ ಸಾವಿಗೀಡಾಗಿದ್ದಾನೆ. ಮೃತನನ್ನು ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಈತ ಕಬ್ಬಿಣದ ಸಲಾಕೆಯನ್ನು ಅಳವಡಿಸುವ ವೇಳೆ ಕಟ್ಟಡ ಮೇಲಿನ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಪ್ರವಹಿಸಿ ಆತ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಅಯೂಬಗೆ ಶೇ.95 ಅಂಕ
ಸಿಂಧನೂರು: ನಗರದ ಜ್ಞಾನಜ್ಯೋತಿ ಪದವಿಪೂರ್ವ ಕಾಲೇಜ್‌ನ ವಿದ್ಯಾರ್ಥಿ ಎಂ.ಡಿ.ಅಯೂಬ ಪ್ರಸಕ್ತ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ಶೇ.96 (576) ಅಂಕ ಪಡೆಯುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾನೆ.
ಬಡಿಬೇಸ್‌ನ ರೆಹಮತ್ ನಗರದ ಬಂಡಿ ಬಾಷಾಸಾಬ ಅವರ ಪುತ್ರರಾದ ಎಂ.ಡಿ.ಅಯೂಬ ಬಡತನ ಕುಟುಂಬದಿಂದ ಬಂದ ಪ್ರತಿಭಾನ್ವಿತ ವಿದ್ಯಾರ್ಥಿ. ತಂದೆ ತಳ್ಳುಗಾಡಿಗಳನ್ನು ಬಾಡಿಗೆ ಕೊಟ್ಟು ಅದರ ಆಧಾರದ ಮೇಲೆಯ ಜೀವನ ನಡೆಸುತ್ತಾರೆ. ಕಷ್ಟದ ಪರಿಸ್ಥಿತಿಯಲ್ಲಿಯೂ ಓದಿನೆಡೆಗೆ ಹೆಚ್ಚಿನ ಆಸಕ್ತಿ ವಹಿಸಿ ಉತ್ತಮ ಅಂಕಗಳನ್ನು ಪಡೆದಿರುವ ಎಂ.ಡಿ.ಅಯೂಬ ಬಗ್ಗೆ ಶಾಲಾ ಪ್ರಾಂಶುಪಾಲ ವಿಷ್ಣುವರ್ಧನರೆಡ್ಡಿ ಹಾಗೂ ಉಪನ್ಯಾಸಕ ವರ್ಗ ಸಂತಸ ವ್ಯಕ್ತಪಡಿಸಿದ್ದಾರೆ.    ಮನೆಯ ಪರಿಸ್ಥಿತಿಯನ್ನು ಚೆನ್ನಾಗಿ ತಿಳಿದಿದ್ದ ತಮ್ಮ ಮಗ ಯಾವುದಕ್ಕೂ ಬೇಜಾರು ಮಾಡಿಕೊಳ್ಳದೇ ಸವಾಲಾಗಿ ಸ್ವೀಕರಿಸಿ ಪಿಯು ಪರೀಕ್ಷೆಯಲ್ಲಿ ತಾಲೂಕಿಗೆ ಅತ್ಯಧಿಕ ಅಂಕಗಳನ್ನು ಪಡೆದಿರುವುದಕ್ಕೆ ತುಂಬಾ ಖುಷಿಯಾಗಿದೆ ಎಂದು ತಂದೆ ಬಂಡಿ ಬಾಷಾಸಾಬ ಹರ್ಷ ವ್ಯಕ್ತಪಡಿಸುತ್ತಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.