ರಾಯಚೂರು

ಸಮರ್ಥ ನಾಯಕನಿಗೆ ಸಿಎಂ ಪಟ್ಟ; ಹರ್ಷ

Published On :

ಸಿಂಧನೂರು: ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಸಮರ್ಥ ನಾಯಕರಾಗಿದ್ದರಿಂದ ಸರ್ವಾನುಮತದಿಂದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಎನ್.ಶಿವನಾಗಪ್ಪ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಂಪನಗೌಡ ಬಾದರ್ಲಿ ಹರ್ಷ ವ್ಯಕ್ತಪಡಿಸಿದರು.
ಶಾಸಕ ಹಂಪನಗೌಡ ಬಾದರ್ಲಿಯವರ ನಿವಾಸದಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯನವರು ರಾಜಕೀಯ ಅನೇಕ ಮಜಲುಗಳನ್ನು ಕಂಡವರು. 6 ಬಾರಿ ರಾಜ್ಯಕ್ಕೆ ಉತ್ತಮ ಬಜೆಟ್ ನೀಡಿದ್ದಾರೆ. ಅವರು ರಾಜ್ಯಕ್ಕೆ ಉತ್ತಮ ಆಡಳಿತ ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಆಗಲಿದೆ ಎಂದರು.
ಪ್ರಮಾಣ ವಚನ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದು, ಸಿಂಧನೂರಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ತೆರಳಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇವೆ ಎಂದರು.
ವಿಶ್ವಾಸ: ಹಂಪನಗೌಡ ಬಾದರ್ಲಿಯವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಸರ್ಕಾರ ಇರುವ ಪಕ್ಷ ಗೆದ್ದಿರುವುದರಿಂದ ಬಾದರ್ಲಿಯವರಿಗೆ ಮಂತ್ರಿ ಸ್ಥಾನ ನೀಡುವ ವಿಶ್ವಾಸವಿದೆ ಎಂದರು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಎಂ.ಕಾಳಿಂಗಪ್ಪ, ಕಾಂಗ್ರೆಸ್ ನಗರಾಧ್ಯಕ್ಷ ಜಾಫರ ಜಾಹಗೀರದಾರ, ಜಿಪಂ ಸದಸ್ಯ ಚಂದೂಸಾಬ ಮುಳ್ಳೂರು, ಶಿವನಗೌಡ ಎಲೆಕೂಡ್ಲಿಗಿ, ಕೊಪ್ಪಳ ಲೋಕಸಭಾ ಕ್ಷೇತ್ರದ ಯುವ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ, ಎಪಿಎಂಸಿ ಅಧ್ಯಕ್ಷ ಸಣ್ಣ ಕರಿಯಪ್ಪ, ಮುಖಂಡರಾದ ವೀರೇಶಪ್ಪ ಮಾಡ ಶಿರವಾರ, ಹನುಮೇಶ ಕಟಾಲಿ, ನಗರಸಭಾ ಸದಸ್ಯರಾದ ಶೇಖರಪ್ಪ ಗಿಣಿವಾರ, ವೆಂಕೋಬಣ್ಣ ಬಂಗಿ ಹಾಗೂ ಇತರರು ಇದ್ದರು.
ಸಂಭ್ರಮಾಚರಣೆ: ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುತ್ತಿದ್ದಂತೆ ಬ್ಲಾಕ್ ಕಾಂಗ್ರೆಸ್ ಹಾಗೂ ಯೂತ್ ಘಟಕದಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.