ರಾಯಚೂರು

ವೃತ್ತಿ ಮಾರ್ಗ ಕಾರ್ಯಕ್ರಮ ನಡೆಯಲಿ

Published On :

ಕನ್ನಡಪ್ರಭ ವಾರ್ತೆ  ,  ಬೀದರ್  ,  ಮೇ 11
ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಡಿಪ್ಲೋಮಾ ನಂತರ ಮುಂದೇನು  ವಿಷಯ ಕುರಿತ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ಶಿಷ್ಯವೇತನ ಜಾಗೃತಿ ಕಾರ್ಯಕ್ರಮವು ನಗರದ ಜಿಲ್ಲಾ ರಂಗಮಂದಿರದಲ್ಲಿ ಶನಿವಾರ ನಡೆಯಿತು.
  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಪಿ.ಸಿ. ಜಾಫರ್, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಗಳು ಶಾಲಾ ಮಟ್ಟದಲ್ಲಿಯೂ ನಡೆಯಬೇಕು. ಶಿಕ್ಷಕರೇ ಮಕ್ಕಳಿಗೆ ಮಾರ್ಗದರ್ಶನ ನೀಡುವಂತಾಗಬೇಕು ಎಂದು ಹೇಳಿದರು. ಪ್ರಸ್ತುತ ಎಲ್ಲ ಕೋರ್ಸ್‌ಗಳೂ ಮಹತ್ವಪೂರ್ಣವೇ ಆಗಿವೆ ಆದ್ದರಿಂದ ಯಾವುದೇ ಕೋರ್ಸಗಳನ್ನು ಕಡೆಗಣಿಸಬಾರದು. ಪಾಲಕರಿಗೆ ಮಾಡಲು ಆಗದ ಕೋರ್ಸಗಳನ್ನು ತಮ್ಮ ಮಕ್ಕಳ ಮೂಲಕ ಸಾಕಾರಗೊಳಿಸಿಕೊಳ್ಳಬೇಕು ಎಂದು ಹೇಳಿದರು.
ಉನ್ನತ ಶಿಕ್ಷಣ: ನಿವೃತ್ತ ಐಎಎಸ್ ಅಧಿಕಾರಿ, ಇಸ್ಲಾಮಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮುಖ್ಯ ಆಡಳಿತಾಧಿಕಾರಿ ಅಜೀಜ್ ಉಲ್ಲಾ ಬೇಗ್ ಮಾತನಾಡಿ, ಕೆಲ ವರ್ಷಗಳ ಹಿಂದೆ ಉನ್ನತ ಶಿಕ್ಷಣ ಸಿರಿವಂತರಿಗೆ ಮಾತ್ರ ಮೀಸಲು ಎನ್ನುವಂತಹ ಸ್ಥಿತಿ ಇತ್ತು. ಇಂದು ಪರಿಸ್ಥಿತಿ ಬದಲಾಗಿದೆ ಬಡವರ ಮಕ್ಕಳೂ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಸಮಾಜದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ ಎಂದು ಹೇಳಿದರು.
  ಬೆಂಗಳೂರಿನ ಸಿಗ್ನಾ ಇಂಡಿಯಾದ ನಿರ್ದೇಶಕ ಅಮೀನ್ ಎ ಮುದಸ್ಸರ್ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ನಂತರ ಮುಂದೇನು ಹಾಗೂ ವಿದ್ಯಾರ್ಥಿಗಳಿಗಿರುವ ಶಿಷ್ಯ ವೇತನದ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಎಸ್‌ಎಸ್‌ಎಲ್ ಹಾಗೂ ದ್ವಿತೀಯ ಪಿಯುಸಿ ನಂತರ ವಿದ್ಯಾರ್ಥಿಗಳಿಗೆ ಸಾಕಷ್ಟು ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ಅವಕಾಶಗಳಿವೆ. ಅಲ್ಲದೆ, ಇದಕ್ಕಾಗಿ ಸರ್ಕಾರ ಹಾಗೂ ವಿವಿಧ ಸಂಘ ಸಂಸ್ಥೆಗಳು ಶಿಷ್ಯವೇತನ ಸಹ ನೀಡುತ್ತಿವೆ. ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕು ಎಂದು ಹೇಳಿದರು.
ಯಶಸ್ಸಿನ ಮಾರ್ಗ: ಬಡ ವಿದ್ಯಾರ್ಥಿಗಳು ಸರ್ಕಾರ, ಸಂಘ ಸಂಸ್ಥೆಗಳ ನೆರವು ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಕಠಿಣ ಪರಿಶ್ರಮವೇ ಯಶಸ್ಸಿನತ್ತ ಕರೆದೊಯ್ಯುವ ಮಾರ್ಗವಾಗಿದೆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಯಾವ ಸ್ಥಾನದಲ್ಲಿ ಇರಬೇಕು ಎನ್ನುವುದನ್ನು ಈಗಲೇ ನಿರ್ಧರಿಸಬೇಕು ಎಂದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ನಂತರದ ಕೋರ್ಸಗಳು ಹಾಗೂ ಶಿಷ್ಯ ವೇತನದ ಮಾಹಿತಿ ಒಳಗೊಂಡ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಅಲ್ಲದೆ, ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಯಿತು. ಶಾಹೀನ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಅಬ್ದುಲ್ ಖದೀರ್ ಉಪಸ್ಥಿತರಿದ್ದರು. ಜಿಲ್ಲೆಯ ನೂರಾರು ವಿದ್ಯಾರ್ಥಿಗಳು, ಪಾಲಕರು ಪಾಲ್ಗೊಂಡಿದ್ದರು.
  ಬೆಂಗಳೂರಿನ ಇಸ್ಲಾಮಿಯಾ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಮಂಗಳೂರಿನ ಬೇರಿಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಶಾಹೀನ್ ಪಿಯು ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.