ರಾಯಚೂರು

'ಫಲಾಪೇಕ್ಷೆಯಿಲ್ಲದ ಸೇವೆ ಸಲ್ಲಿಸಿ'

Published On :

ರಾಯಚೂರು: ನಿಸ್ವಾರ್ಥ ಹಾಗೂ ಫಲಾಪೇಕ್ಷೆಯಿಲ್ಲದ ಸಮಾಜ ಸೇವೆಯಲ್ಲಿ ಪಾಲ್ಗೊಳ್ಳುವಂತೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿವಿಯ ಮುಖ್ಯಸ್ಥೆ ಸ್ಮಿತಾ ಅಕ್ಕನವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಅವರು ನಗರದ ರಂಗಮಂದಿರದಲ್ಲಿ ಮಂಗಳವಾರ ಗುಲ್ಬರ್ಗ ವಿವಿ ಮತ್ತು ರೂಡ್ಸ್ ಸಮಾಜ ಕಾರ್ಯ ಕಾಲೇಜು ವತಿಯಿಂದ ಆಯೋಜಿಸಿದ್ದ ಸಂದೇಶ-2014 ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ, ಸಮಾಜ ಸೇವೆಯಲ್ಲಿ ತೊಡಗುವವರಿಗೆ ಸಾಧನೆಯೇ ಮುಖ್ಯವಾಗಬೇಕು ವಿನಾ ಸಾಧನೆಗೆ ಪ್ರತಿಯಾಗಿ ಗೌರವ, ಸನ್ಮಾನ ನಿರೀಕ್ಷಿಸುವುದು ಉದ್ದೇಶವಾಗಬಾರದು ಎಂದು ಸಲಹೆ ನೀಡಿದರು.
ಸಮಾಜ ಸೇವೆಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮಾಭಿಮಾನ, ಗೌರವ ಮೂಡಲು ಸಾಧ್ಯವಾಗುತ್ತದೆ. ಅದೇ ರೀತಿ ವೈಯಕ್ತಿಕ ಬೆಳವಣಿಗೆಗೂ ದಾರಿಯಾಗುತ್ತದೆ. ಸಮಾಜ ಕಾರ್ಯ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಸಮಾಜದಲ್ಲಿನ ಸಮಸ್ಯೆಗಳನ್ನು ಅರಿತು ಮುಂದುವರಿಯುವಂತೆ ಅವರು ಸಲಹೆ ನೀಡಿದರು.
ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸಿ: ನಗರಸಭೆಯ ಹಿರಿಯ ಸದಸ್ಯ ಜಯಣ್ಣ ಮಾತನಾಡಿ, ಸಮಾಜ ಸೇವೆ ಎಂಬುದು ಕ್ಲಿಷ್ಟಕರ ವಿಷಯ. ಆದರೂ ಈ ಸೇವೆಯಲ್ಲಿ ತೊಡಗುವ ಮೂಲಕ ಎಂಥ ಸಮಸ್ಯೆಯನ್ನೂ ಸವಾಲಾಗಿ ಸ್ವೀಕರಿಸುವಂತೆ ಸಲಹೆ ನೀಡಿ, ಸವಾಲು ಎದುರಿಸುವತ್ತ ಸಾಮರ್ಥ್ಯ ಬೆಳೆಸಿಕೊಳ್ಳುವಂತೆ ಹೇಳಿದರು.
ಸಮಾಜ ಕಾರ್ಯ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಸಮಾಜ ಸೇವೆ ಮಾಡುವ ನಿಟ್ಟಿನಲ್ಲಿ ಬಹುದೊಡ್ಡ ಜವಾಬ್ದಾರಿಯಿದ್ದು, ಅದನ್ನು ಅರಿತು ಮುಂದುವರಿಯಬೇಕು. ಸಮಾಜದಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವತ್ತ ವಿದ್ಯಾರ್ಥಿಗಳು ಹೆಚ್ಚಿನ ಗಮನಹರಿಸುವಂತೆ ತಿಳಿಸಿದರು.
ದೇಶದಲ್ಲಿ ಸಮಾಜ ಸೇವೆ ಎಂಬುದು ಸ್ವಾರ್ಥ ಸಾಧನೆ ಮತ್ತು ಭಾಷಣ ಮಾಡುವುದಕ್ಕೆ ಸೀಮಿತವಾಗಿದೆ. ಆದರೆ ಸಮಾಜ ಸೇವೆ ಎಂಬುದು ಸಮಾಜದ ಪ್ರಗತಿಗೆ ಪೂರಕವಾದ ಪರಿಸರ ನಿರ್ಮಿಸುವ ಕಾರ್ಯ ಎಂಬುದನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕಿದೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಆಯೋಜಿಸಿರುವ ಎರಡು ದಿನಗಳ ಕಾರ್ಯಾಗಾರದಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳು ಸಮಾಜ ಕಾರ್ಯದ ಆಶಯವನ್ನು ಅರಿತು ಅಳವಡಿಸಿಕೊಂಡು ಯಶಸ್ಸು ಕಾಣುವಂತೆ ಸಲಹೆ ನೀಡಿದರು.
ಸಮಾರಂಭದಲ್ಲಿ ರೂಡ್ಸ್ ಸಂಸ್ಥೆಯ ಅಧ್ಯಕ್ಷ ಬಸವರಾಜ್, ಸಮಾಜ ಕಾರ್ಯ ಕಾಲೇಜಿನ ಪ್ರಾಚಾರ್ಯ ಕೆಂಪಣ್ಣ, ಸಿದ್ದರಾಮಪ್ಪ, ಮಂಜುನಾಥಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
 ಈ ವೇಳೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು. ವಿವಿಧೆಡೆಯಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಹಾಗೂ ಸಮಾಜ ಕಾರ್ಯ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.