ರಾಯಚೂರು

ಮಾಚಿದೇವರ ತತ್ವಾದರ್ಶ ಅಳವಡಿಕೆಗೆ ಸಲಹೆ

Published On :

ರಾಯಚೂರು: ಮಹಾನ್ ಶರಣ ಮಡಿವಾಳ ಮಾಚಿದೇವರ ತತ್ವಾದರ್ಶಗಳನ್ನು ಸಮಾಜದವರು ಜೀವನದಲ್ಲಿ ಅಳವಡಿಸಿಕೊಂಡು ಪ್ರಗತಿ ಸಾಧಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಶಂಕ್ರಪ್ಪ ಕರೆ ನೀಡಿದರು.
  ಅವರು ನಗರದಲ್ಲಿ ಮಂಗಳವಾರ ಮಡಿವಾಳ ಮಾಚಿದೇವರ ಜಯಂತ್ಯುತ್ಸವದ ಸಂದರ್ಭ ಮಾಚಿದೇವರ ಪುತ್ಥಳಿಗೆ ಮಾರ್ಲಾಪಣೆ ಮಾಡಿ ಗೌರವ ಸಲ್ಲಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದರು.
 ಮಡಿವಾಳ ಸಮಾಜದವರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಕಾಯಕ ನಿಷ್ಠರಾಗಿ ದುಡಿಯುವಂತೆ ಮನವಿ ಮಾಡಿದರು.
ಶಿಕ್ಷಿತರಾಗಿ: ಸಮಾಜದಲ್ಲಿ ಅಭಿವೃದ್ಧಿ ಹೊಂದಲು ಎಲ್ಲರೂ ಶೈಕ್ಷಣಿಕವಾಗಿ ಮುಂದೆ ಬರುವಂತೆ ಮನವಿ ಮಾಡಿದ ಅವರು, ಮಕ್ಕಳಿಗೆ ಶಿಕ್ಷಣ ಕೊಡಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ನಗರದ ಮುಖ್ಯರಸ್ತೆಯಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರದ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ನಗರಸಭೆ ಸದಸ್ಯ ನರಸಪ್ಪ ಯಕ್ಲಾಸಪುರ, ವೀರೇಶ್, ನಗರಸಭೆ ಮಾಜಿ ಸದಸ್ಯ ಶಿವಮೂರ್ತಿ, ಟಿ.ಮಲ್ಲೇಶ್, ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಸೂಗಪ್ಪ, ಗೌರವಾಧ್ಯಕ್ಷ ಎಂ.ಹುಸೇನಪ್ಪ,ಜಂಬಣ್ಣ ಯಕ್ಲಾಸಪೂರು, ಜಯಂತೋತ್ಸವ ಸಮಿತಿ ಅಧ್ಯಕ್ಷ ಯು. ಆಂಜಿನೇಯ್ಯ ಯುವ ಘಟಕದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಸೇರಿದಂತೆ ನೂರಾರು ಜನ ಮಹಿಳೆಯರು ಮಕ್ಕಳು ಪಾಲ್ಗೊಂಡಿದ್ದರು.
ಜಯಂತ್ಯುತ್ಸವ ಸಂದರ್ಭ ಮಡಿವಾಳ ಮಾಚಿದೇವರ ಪುತ್ಥಳಿಗೆ ಅನೇಕ ಗಣ್ಯರು ಮಾರ್ಲಾಪಣೆ ಮಾಡಿ ಗೌರವ ಸಲ್ಲಿಸಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.