ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ವ್ಯಕ್ತಿ ಸಾವು
ರಾಯಚೂರು: ನಗರದ ರೇಲ್ವೆ ನಿಲ್ದಾಣದ ಬಳಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತನನ್ನು ರಾಂಪುರ ಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ಈತ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಅಸು ನೀಗಿದ್ದಾನೆ ಎಂದು ರೇಲ್ವೆ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮರಳು; 10 ಟ್ರ್ಯಾಕ್ಟರ್ ವಶ
ರಾಯಚೂರು: ದೇವದುರ್ಗ ತಾಲೂಕಿನ ಬುಂಕಲದೊಡ್ಡಿ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ 10 ಟ್ರ್ಯಾಕ್ಟರ್ ಮತ್ತು ಎರಡು ಲಾರಿಗಳನ್ನು ತಹಸೀಲ್ದಾರ್ ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.
ಗ್ರಾಮದ ಬಳಿಯಿರುವ ಕೃಷ್ಣಾ ನದಿಯಿಂದ ಅಕ್ರಮವಾಗಿ ಮರಳನ್ನು ವಾಹನಗಳಿಗೆ ತುಂಬಿ ಸಾಗಿಸುತ್ತಿದ್ದ ವೇಳೆ ದಾಳಿ ಮಾಡಿದ ತಹಸೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ ನೇತೃತ್ವದ ಅಧಿಕಾರಿಗಳ ತಂಡವು, 10 ಟ್ರ್ಯಾಕ್ಟರ್ ಹಾಗೂ ಎರಡು ಲಾರಿಗಳನ್ನು ಜಪ್ತಿ ಮಾಡಿದ್ದಾರೆ.
ಆಕಸ್ಮಿಕ ಬೆಂಕಿ: ಲಕ್ಷಾಂತರ ರು. ಹಾನಿ
ರಾಯಚೂರು: ಲಿಂಗಸ್ಗೂರು ತಾಲೂಕಿನ ಗಡ್ಡಿಹಳ್ಳ ಗ್ರಾಮದ ಸಮೀಪ ಖಾಲಿ ಚೀಲ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ.
ಲಾರಿ ಚಾಲಕ ಪ್ರಕಾಶಬಾಬು ಎಂಬಾತ ಸುರಪುರ ತಾಲೂಕಿನ ದೇವಾಪುರ ಕ್ರಾಸ್ಗೆ ಬತ್ತ ತರುವ ಉದ್ದೇಶದಿಂದ ಖಾಲಿ ಚೀಲಗಳನ್ನು ಲಾರಿಯಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ಚೀಲಕ್ಕೆ ಬೆಂಕಿ ತಗುಲಿ ಲಾರಿಯಲ್ಲಿದ್ದ ಚೀಲ, ಚಾಲಕನಿರುವ ಕ್ಯಾಬಿನ್ ಸುಟ್ಟು ಒಟ್ಟು 1.80 ಲಕ್ಷ ಆಸ್ತಿಗೆ ಹಾನಿಯಾಗಿದೆ ಎಂದು ಪೊಲೀಸರಿಗೆ ದೂರಲಾಗಿದೆ. ಈ ಕುರಿತು ಲಿಂಗಸ್ಗೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

