ತಾಲೂಕು ಸಾಹಿತ್ಯ ಸಮ್ಮೇಳನ; ಸ್ವಾಗತ ಸಮಿತಿಗೆ ಆಯ್ಕೆ
ರಾಯಚೂರು: ನಗರದಲ್ಲಿ ಜೂ.15ರಂದು ನಡೆಯಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರ ಆಯ್ಕೆ ಕುರಿತು ತಾಲೂಕು ಕಸಾಪ ಪದಾಧಿಕಾರಿಗಳ ಸಭೆ ನಡೆಸಲಾಯಿತು.
ತಾಲೂಕು ಕಸಾಪ ಅಧ್ಯಕ್ಷ ಚಿದಾನಂದ ಸಾಲಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ನಗರ ವಿಧಾನಸಭೆ ಕ್ಷೇತ್ರದ ಶಾಸಕ ಡಾ. ಶಿವರಾಜ್ ಪಾಟೀಲ್ ಹಾಗೂ ಕಾರ್ಯಾಧ್ಯಕ್ಷರಾಗಿ ಗ್ರಾಮೀಣ ಕ್ಷೇತ್ರದ ಶಾಸಕ ತಿಪ್ಪರಾಜ ಹವಾಲ್ದಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸಭೆಯ ನಂತರದಲ್ಲಿ ಶಾಸಕರಿಬ್ಬರನ್ನೂ ಭೇಟಿ ಮಾಡಿದ ಕಸಾಪ ಅಧ್ಯಕ್ಷ ಚಿದಾನಂದ ಸಾಲಿ ನೇತೃತ್ವದ ನಿಯೋಗವು ಸಮ್ಮೇಳನದ ಸ್ವಾಗತ ಸಮಿತಿಗೆ ಆಯ್ಕೆ ಮಾಡಿರುವ ಕುರಿತು ಮಾಹಿತಿ ನೀಡಿ ಸಮ್ಮೇಳನ ಯಶಸ್ವಿಯಾಗಿ ನಡೆಸಿಕೊಡಲು ಮನವಿ ಮಾಡಿತು.
ನಿಯೋಗದ ಮನವಿಗೆ ಸ್ಪಂದಿಸಿದ ಶಾಸಕರಿಬ್ಬರೂ ಸಮ್ಮೇಳನದ ಯಶಸ್ವಿಗೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು. ನಿಯೋಗದಲ್ಲಿ ಕಸಾಪ ಪ್ರಮುಖರಾದ ವೆಂಕಟೇಶ ನವಲಿ, ವಿಜಯರಾಜೇಂದ್ರ, ಭೀಮನಗೌಡ ಇಟಗಿ, ವೀರಹನುಮಾನ್, ವಿ.ಎನ್. ಅಕ್ಕಿ, ಲಕ್ಷ್ಮಿರೆಡ್ಡಿ, ರುದ್ರಯ್ಯ ಗುಣಾರಿ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

