ರಾಯಚೂರು

ಪಕ್ಷ ವಿರೋಧಿ ಚಟುವಟಿಕೆ ಕ್ರಮಕ್ಕೆ ರಾಜ್ಯಾಧ್ಯಕ್ಷರಿಗೆ ದೂರು

Published On :

ಲಿಂಗಸ್ಗೂರು: ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕೆಲ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಿಗೆ ದೂರು ಸಲ್ಲಿಸಲಾಗಿದೆ ಎಂದು ಪರಾಜಿತ ಅಭ್ಯರ್ಥಿ ಡಿ.ಎಸ್.ಹೂಲಗೇರಿ ತಿಳಿಸಿದರು.
ಪಟ್ಟಣದ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ನಿವಾಸದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿ ಒಲವು ತೋರಿರುವುದು ಅಭಿನಾಂದನಾರ್ಹ. ಆದರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಮೇಟಿ, ಎಪಿಎಂಸಿ ನಿರ್ದೇಶಕ ಬಸಣ್ಣ ಮೇಟಿ ಸೇರಿದಂತೆ ಕೆಲ ಮುಖಂಡರ ಪಕ್ಷ ವಿರೋಧಿ ಚಟುವಟಿಕೆಯಿಂದ ಅಲ್ಪ ಮತಗಳಿಂದ ಪರಾಭವಗೊಳ್ಳಬೇಕಾಯಿತು. ಚುನಾವಣಾ ಪ್ರಚಾರ ಸಮಯದಲ್ಲಿ ಅಧ್ಯಕ್ಷ ಮನಮೊಲಿಸಿ ಪ್ರಚಾರಕ್ಕೆ ಕರೆದರೆ ಕೇವಲ 3 ದಿನ ನೆಪಮಾತ್ರಕ್ಕೆ ಆಗಮಿಸಿದರು ಎಂದು ಆರೋಪಿಸಿದರು. ಜಿಪಂ ಸದಸ್ಯ ಭೂಪನಗೌಡ ಕರಡಕಲ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಕ್ಷದ ಪ್ರಣಾಳಿಕೆಯಂತೆ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಹಲವು ಮಹತ್ವದ ಯೋಜನೆ ಜಾರಿಗೆ ತಂದಿರುವುದು ಸ್ವಾಗತಾರ್ಹ ಕ್ರಮ. ಸರ್ಕಾರ ನಮ್ಮದೇ ಆಗಿರುವುದರಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಗೊಂದಲಕ್ಕೀಡಾಗುವ ಅವಶ್ಯಕತೆ ಇಲ್ಲ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲು ಮನವೀ ಮಾಡಲಾಗುವುದು. ಇನ್ನು 2-3 ದಿನಗಳಲ್ಲಿ ಕ್ಷೇತ್ರದ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು ಶ್ರಮಿಸುವುದಾಗಿ ತಿಳಿಸಿದರು.  ಪಕ್ಷದ ಮುಖಂಡರಾದ ಗುಂಡಪ್ಪ ನಾಯಕ, ಮಲ್ಲಣ್ಣ ವಾರದ, ಮಹಾಂತೇಶ ಪಾಟೀಲ, ಚೆನ್ನಾರೆಡ್ಡಿ ಬಿರಾದಾರ, ಎಂ.ಡಿ.ರಫೀ, ಪರಸಪ್ಪ ಹುನಕುಂಟಿ, ಸಂಗಣ್ಣ ದೇಸಾಯಿ, ಪರಶುರಾಮ ನಗನೂರು ಸೇರಿದಂತೆ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.