ದೃಶ್ಯಕಲಾ ಕಾಲೇಜು: ಪ್ರವೇಶಕ್ಕೆ ಆಹ್ವಾನ
ರಾಯಚೂರು: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿಗೆ 2013-14ನೇ ಶೈಕ್ಷಣಿಕ ಸಾಲಿಗೆ ವಿವಿಧ ಕೋರ್ಸುಗಳಿಗೆ ಪ್ರವೇಶಕ್ಕೆ ಆಸಕ್ತರಿಂದ ಅರ್ಜಿ ಕರೆಯಲಾಗಿದೆ.
ಪ್ರಥಮ ಮೂಲ ತರಗತಿ ಹಾಗೂ ಪ್ರಥಮ ಬಿ.ಎಫ್.ಎ ತರಗತಿ(ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ (ಗ್ರಾಫಿಕ್ಸ್), ಅನ್ವಯಕಲೆ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ಹಾಗೂ ಕಲಾ ಇತಿಹಾಸ) ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ಮೂಲ ತರಗತಿಗೆ ಪ್ರವೇಶ ಬಯಸುವವರು ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಪ್ರಥಮ ಬಿ.ಎಫ್.ಎ. ತರಗತಿಗೆ ಪ್ರವೇಶ ಬಯಸುವವರು ದ್ವಿತೀಯ ಮೂಲ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಪ್ರವೇಶದ ಅರ್ಜಿ ಮತ್ತು ವಿವರಣ ಪತ್ರಿಕೆಯನ್ನು ಪಡೆಯಲು ರು. 125 ಪಾವತಿಸಿ ಖುದ್ದಾಗಿ ಅಥವಾ ರು. 150 ಡಿಡಿಯನ್ನು ಡೀನ್, ಕಾವಾ, ಮೈಸೂರು ಇವರ ಹೆಸರಿನಲ್ಲಿ ಪಡೆದು ಅಂಚೆ ಮೂಲಕ ಕಳುಹಿಸಿ ಅರ್ಜಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಜೂ. 4 ಕಡೆದಿನವಾಗಿದ್ದು, ಅರ್ಹತಾ ಪರೀಕ್ಷೆ ಜೂ.11ರಂದು ಬೆಳಗ್ಗೆ 11ಕ್ಕೆ ಮೈಸೂರಿನ ಸಯ್ಯಾಜೀರಾವ್ ರಸ್ತೆಯಲ್ಲಿರುವ ಸಿಟಿಐ ಕಟ್ಟಡದಲ್ಲಿ ನಡೆಸಲಾಗುವುದು. ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕೆಂದು ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

