ಬಾದರ್ಲಿಗೆ ಇದೆಯಾ ಮಂತ್ರಿ ಯೋಗ?
ಸಿಂಧನೂರು: ಸ್ಥಳೀಯ ಶಾಸಕ ಹಂಪನಗೌಡ ಬಾದರ್ಲಿಯವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯುವ ಸಂಭವವಿದ್ದು, ಅವರಿಗೆ ಸಚಿವರಾಗುವ ಯೋಗವಿದೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಸಚಿವ ಹುದ್ದೆಯ ಪ್ರಮುಖ ಆಕಾಂಕ್ಷಿಗಳು ದೆಹಲಿಗೆ ತೆರಳಿದ್ದು, ಅವರಲ್ಲಿ ಹಂಪನಗೌಡ ಬಾದರ್ಲಿ ಒಬ್ಬರಾಗಿದ್ದಾರೆ. ಸಚಿವರಾಗಲು ತೀವ್ರ ಯತ್ನದಲ್ಲಿ ತೊಡಗಿದ್ದಾರೆ. ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರೊಂದಿಗೆ ಹೋಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಕ್ಷೇತ್ರ ಅಭಿವೃದ್ಧಿಯಲ್ಲಿ ತೀವ್ರ ಹಿನ್ನಡೆ: ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೆ ಸಿಂಧನೂರಿನ ಕ್ಷೇತ್ರಕ್ಕೆ ಸಚಿವ ಸ್ಥಾನದ ಭಾಗ್ಯ ದೊರೆಯದೇ ಇರುವುದರಿಂದ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ಪ್ರಮಾಣದಲ್ಲಿ ಆಗದಿರುವುದರಿಂದ ನಾಗರಿಕರು ಅಸಂತೃಪ್ತರಾಗಿದ್ದಾರೆ.
ಸಚಿವ ಸ್ಥಾನ ನೀಡುವ ಮೂಲಕ ಸಿಂಧನೂರು ತಾಲೂಕಿಗೆ ತಗುಲಿಕೊಂಡಿರುವ ಶಾಪವನ್ನು ವಿಮೋಚನೆ ಮಾಡಬೇಕೆಂದು ಮಲ್ಲಿಕಾರ್ಜುನ ಖರ್ಗೆ ಅವರ ಹಂಪನಗೌಡರ ಪರವಾಗಿ ವರಿಷ್ಠರ ಗಮನ ಸೆಳೆದಿದ್ದಾರೆಂದು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ.
ಇತ್ತ ಸಿಎಂ ಸಿದ್ದರಾಮಯ್ಯನವರಿಗೂ ಇದೇ ವಿಷಯವನ್ನು ಶಾಸಕರಾದ ಆರ್.ವಿ. ದೇಶಪಾಂಡೆ, ಬಸವರಾಜ ರಾಯರೆಡ್ಡಿ, ಮಾಜಿ ಶಾಸಕ ಅಮರೇಗೌಡ ಬಯ್ಯಾಪುರರ ಮೂಲಕ ಗಮನ ಸೆಳೆಯುವ ಪ್ರಯತ್ನವನ್ನು ನಿರಂತರವಾಗಿ ನಡೆಸಿರುವುದಾಗಿ ಜಿಪಂ ಸದಸ್ಯರೊಬ್ಬರು ಹೇಳುತ್ತಾರೆ. ಕಳೆದ ನಾಲ್ಕು ದಿನಗಳಿಂದ ಬಾದರ್ಲಿ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

