ರಾಯಚೂರು

ಖಾಸಗಿ ಬಸ್ ಪಲ್ಟಿ: 11 ಮಂದಿಗೆ ಗಾಯ

Published On :

ರಾಯಚೂರು: ಮಾನವಿ ತಾಲೂಕಿನ ಕವಿತಾಳ ಪಟ್ಟಣದ ಹೊರವಲಯದಲ್ಲಿ ಖಾಸಗಿ ಬಸ್ಸೊಂದು ಗುರುವಾರ ತಡರಾತ್ರಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು 11 ಜನರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ದೀಪಾ, ಅವಿನಾಶ, ಹೇಮಾ, ಸುಬ್ಬಾರಾವ್, ಏಶಾ ಪಾಟೀಲ್, ರಾಘವೇಂದ್ರ ಸೇರಿ ಒಟ್ಟು 11 ಜನರೆಂದು ಗುರುತಿಸಲಾಗಿದೆ. ಖಾಸಗಿ ಬಸ್ಸು ಹೈದರಾಬಾದ್‌ನಿಂದ ಗೋವಾಕ್ಕೆ ತೆರಳುತ್ತಿದ್ದ ವೇಳೆ ಕವಿತಾಳ ಪಟ್ಟಣ ಹೊರವಲಯದಲ್ಲಿ ಎದುರಿನಿಂದ ಬರುತ್ತಿದ್ದ ಲಾರಿಗೆ ದಾರಿ ನೀಡುವಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದ್ದರಿಂದ 11 ಜನರಿಗೆ ಗಾಯಗಳಾಗಿವೆ.
ಗಾಯಾಳುಗಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಸ್‌ನಲ್ಲಿ ಒಟ್ಟು 40 ಜನ ಪ್ರಯಾಣಿಕರಿದ್ದರು ಎಂದು ಗೊತ್ತಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟ್ರ್ಯಾಕ್ಟರ್ ಡಿಕ್ಕಿ; ಬಾಲಕಿ ಸಾವು
ರಾಯಚೂರು: ತಾಲೂಕಿನ ಚಿಕ್ಕಮಂಚಾಲೆ ಬಳಿ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಬಾಲಕಿ ಮೃತಪಟ್ಟಿದ್ದಾಳೆ. ಮೃತಳನ್ನು ಪೂಜಿತಾ(3) ಎಂದು ಗುರುತಿಸಲಾಗಿದೆ. ಈಕೆ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದ್ದು, ಅದರಿಂದ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿ ಸಾವು
ರಾಯಚೂರು: ಸಿಂಧನೂರು ತಾಲೂಕಿನ ಬಳಗಾನೂರು ಗ್ರಾಮದ ಬಳಿ ಹಳ್ಳದಲ್ಲಿ ಮುಳುಗಿ ಅಸ್ವಸ್ಥಗೊಂಡಿದ್ದ ಬಾಲಕಿ ಮೃತಪಟ್ಟಿದ್ದಾಳೆ. ಮೃತಳನ್ನು ಚೈತ್ರಶ್ರೀ(12) ಎಂದು ಗುರುತಿಸಲಾಗಿದೆ.
ಈಕೆ ಗ್ರಾಮದ ಬಳಿಯ ಹಳ್ಳಕ್ಕೆ ಬಟ್ಟೆ ತೊಳೆಯಲು ತೆರಳಿದ್ದು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದರಿಂದ ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡಿದ್ದಳು. ಆಕೆಯನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬಳಗಾನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.