ನಾಗಲಾಪುರದಲ್ಲಿ ಶಂಕಿತ ಡೆಂಘೀ; ಆತಂಕದಲ್ಲಿ ಜನತೆ
ಮುದಗಲ್: ಸಮೀಪದ ನಾಗಲಾಪುರ ಗ್ರಾಮದಲ್ಲಿ ಶಂಕಿತ ಡೆಂಘೀ ಹಿನ್ನೆಲೆಯಲ್ಲಿ ಬಾಲಕನೊಬ್ಬನನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಗ್ರಾಮದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮದ ನವೀನ್ ಹನುಮಂತ(10) ಎಂಬ ಬಾಲಕ ತೀವ್ರ ಜ್ವರದಿಂದ ಬಳಲುತ್ತಿದ್ದು ಲಿಂಗಸ್ಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿಯವರು ಗ್ರಾಮದ ಸ್ವಚ್ಛತೆಗೆ ಮುಂದಾಗುತ್ತಿಲ್ಲ ಎಂದು ಗ್ರಾಮಸ್ಥರ ಆರೋಪ. ಅಲ್ಲಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪಾದನಾ ಕಾರ್ಖಾನೆಯಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಮತ್ತು ಪಂಚಾಯಿತಿಯವರು ಮುನ್ನೆಚ್ಚರಿಕೆ ಕ್ರಮ ಕೈಕೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಲೈಸನ್ಸ್ ಇಲ್ಲದ ಮಾರಾಟ: ಜಪ್ತಿ
ರಾಯಚೂರು: ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದಲ್ಲಿ ಯಾವುದೇ ಪರವಾನಗಿಯಿಲ್ಲದೇ ಕಬ್ಬಿಣದ ಸರಳುಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಜಸ್ಥಾನ ಮೂಲದ ಸಾಮಜಿ ಭೈ ಎಂದು ಗುರುತಿಸಲಾಗಿದೆ. ಈತ ಅರಕೇರಾ ಗ್ರಾಮದಲ್ಲಿ ಯಂಕೋಬ ನಾಯಕ ಎಂಬುವವರಿಗೆ ಸೇರಿದ ಜಾಗೆಯಲ್ಲಿ ಅಂಬಿಕಾ ಸ್ಟೀಲ್ ಎಂಬ ಅಂಗಡಿ ತೆರೆದು ಅಂಗಡಿಯಲ್ಲಿ ಕಬ್ಬಿಣದ ಪಟ್ಟಿಗಳು, ಪೈಪುಗಳು, ಆಂಗ್ಲರ್ ಗಳು, ತೆಳ್ಳನೆಯ ಕಬ್ಬಿಣದ ಶೀಟ್ಗಳು, ಬೈಂಡಿಂಗ್ ವೈರ್, ಜೆವೈರ್ ಸೇರಿದಂತೆ ವಿವಿಧ ಕಬ್ಬಿಣದ ಸಾಮಗ್ರಿ ಮಾರಾಟ ಮಾಡುತ್ತಿದ್ದು, ಅದಕ್ಕಾಗಿ ಯಾವುದೇ ಲೈಸೆನ್ಸ್ ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ ರು. 3.92 ಲಕ್ಷ ಸಾಮಗ್ರಿ ಜಪ್ತಿ ಮಾಡಿದ್ದಾರೆ. ಈ ಕುರಿತು ದೇವದುರ್ಗ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
34 ಕುರಿಗಳ ಸಾವು
ರಾಯಚೂರು: ಸಿಂಧನೂರು ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ಈಚೆಗೆ ಬೀಸಿದ ಬಿರುಗಾಳಿಗೆ ಹೆದರಿದ 34 ಕುರಿಗಳು ಹಳ್ಳದಲ್ಲಿನ ತಗ್ಗಿಗೆ ಬಿದ್ದು ಸಾವಿಗೀಡಾಗಿವೆ. ಬೆಳಗಾವಿ ಜಿಲ್ಲೆ ಅಕ್ಕೋಳ ಗ್ರಾಮದ ಕುರಿಗಾರ ಯಲ್ಲಪ್ಪ ಎಂಬಾತನಿಗೆ ಸೇರಿದ 34 ಕುರಿಗಳು ಗ್ರಾಮದಲ್ಲಿ ಬೀಸಿದ ಬಿರುಗಾಳಿಗೆ ಹೆದರಿ ಹಳ್ಳದ ತಗ್ಗಿಗೆ ಹಾರಿ ಸಾವಿಗೀಡಾಗಿದ್ದು, ಇದರಿಂದ ರು. 1.85 ಲಕ್ಷ ನಷ್ಟವಾಗಿದೆ ಎಂದು ಪೊಲೀಸರಿಗೆ ದೂರಲಾಗಿದೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

