ವಸತಿ ಶಾಲೆ ಪ್ರವೇಶಕ್ಕೆ ಕೌನ್ಸೆಲಿಂಗ್
ರಾಯಚೂರು: 2013- 14ನೇ ಶೈಕ್ಷಣಿಕ ಸಾಲಿನ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ವಸತಿ ಶಾಲೆಗಳಿಗೆ ಈಗಾಗಲೇ ಪ್ರವೇಶ ಪರೀಕ್ಷೆ ನಡೆಸಿದ್ದು, ಮೇ 22ರಿಂದ 24 ರವರೆಗೆ ಕೌನ್ಸೆಲಿಂಗ್ ನಡೆಸಲಾಗುತ್ತದೆ. ವಿದ್ಯಾರ್ಥಿಗಳ ಮೀಸಲಾತಿವಾರು ಆಯ್ಕೆ ಕುರಿತು ನಗರದ ಮೊರಾರ್ಜಿ ದೇಸಾಯಿ (ನವೋದಯ) ಮಾದರಿ ವಸತಿ ಶಾಲೆ ಆಶಾಪೂರು ರಸ್ತೆ ರಾಯಚೂರು ಇಲ್ಲಿ ಮೇ 22ರಿಂದ 24ರವರೆಗೆ ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ಕೌನ್ಸೆಲಿಂಗ್ ನಡೆಸಲಾಗುತ್ತದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ತಿಳಿಸಿದೆ.
ವಾಹನ ಚಾಲನಾ ತರಬೇತಿಗೆ ಕರೆ
ರಾಯಚೂರು: ಪ್ರಾದೇಶಿಕ ಸಾರಿಗೆ ಕಚೇರಿವತಿಯಿಂದ ಜಿಲ್ಲೆಯ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗಾಗಿ ವಿಶೇಷ ಘಟಕ ಯೋಜನೆ ಅಡಿಯಲ್ಲಿ 56 ಜನರಿಗೆ ಚಾಲನಾ ತರಬೇತಿ ಶಾಲೆಗಳಿಂದ ವಾಹನದ ಚಾಲನಾ ತರಬೇತಿ ನೀಡಲಾಗುತ್ತಿದ್ದು ಅರ್ಹರಿಂದ ಅರ್ಜಿ ಕರೆಯಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಹತ್ತನೇ ತರಗತಿ ಪಾಸಾದ ಅಭ್ಯರ್ಥಿಗಳು ಲಭ್ಯವಿಲ್ಲದ ಪಕ್ಷದಲ್ಲಿ ಎಂಟನೇ ತರಗತಿ ಪಾಸಾದ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಆರ್‌ಟಿಓ ಕಚೇರಿಗೆ ಖುದ್ದಾಗಿ ಹಾಜರಾಗಿ ಮಾಹಿತಿ ವಿವರಗಳನ್ನು ಮೇ 31ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು. ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಂಪರ್ಕಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

