ರಾಯಚೂರು

ಐಟಿಐ ಪ್ರವೇಶ: ಅರ್ಜಿ ಕರೆ

Published On :

ರಾಯಚೂರು: ಪ್ರಸಕ್ತ ಶೈಕ್ಷಣಿಕ ವರ್ಷಕ್ಕಾಗಿ ರಾಜ್ಯದಲ್ಲಿನ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೋರಲಾಗಿದೆ.ರಾಜ್ಯದಲ್ಲಿನ ಯಾವುದೇ 15 ವೃತ್ತಿಗಳನ್ನು 15 ಐಟಿಐ ಕಾಲೇಜುಗಳಲ್ಲಿ ಆಯ್ಕೆ ಮಾಡಲು ಅವಕಾಶವಿದೆ. ಆಸಕ್ತರು ರಾಯಚೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ಇಲಾಖೆಯ ವೆಬ್‌ಸೈಟ್‌ಗಳಾದ ಢಿಢಿಢಿ.ಜಟಠಡ್ಠ್ಜಿ.್ಞಛ್ಠ.ಟ್ಝ್ಛಿ.್ಝಟಿ ಅಥವಾ ಢಿಢಿಢಿ.ಜಜಡ್ಞಿಛ್ಠಟಿಛಡಿಛ್ಞಛ.್ಟ್ಠ್ಜ.್ಝಟಿ ಇಲ್ಲಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ.ಆನ್‌ಲೈನ್ ಮೂಲಕ ಅರ್ಜಿಯನ್ನು ಮೇ 31ರವರೆಗೆ ಸಲ್ಲಿಸಬಹುದಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ರಾಜೇಶ ಬಿ. ಬಾವಗಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕೈಗಾರಿಕಾ ಸಂಸ್ಥೆಗಳಿಗೆ ಅಥವಾ ದೂರವಾಣಿ ಸಂಖ್ಯೆ-08532-240182 ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.
ಸಬಲೀಕರಣಕ್ಕೆ ಮುನೀರ್ ಕರೆ
ಯಾದಗಿರಿ: ಹೆಣ್ಣು ಮಕ್ಕಳ ಅನುಕೂಲಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತದೆ. ಹೀಗಾಗಿ ಮಹಿಳೆಯರ ಶಿಕ್ಷಣ ಮತ್ತು ಆರ್ಥಿಕತೆಯಿಂದ ಮಾತ್ರ ಸಬಲೀಕರಣ ಸಾಧ್ಯ ಎಂದು ನಗರಸಭೆ ಆಯುಕ್ತ ಮಹ್ಮದ್ ಮುನಿರ್ ಹೇಳಿದರು.
  ನಗರದ ನಜರೇತ ಕಾಲೋನಿಯಲ್ಲಿರುವ ಮದರ್ ತೆರೇಸಾ ಸ್ಕೂಲ್ ಆಫ್ ನರ್ಸಿಂಗ್ ಸಂಸ್ಥೆಯಲ್ಲಿ ನಗರಸಭೆ ಯಾದಗಿರಿ, ಸುವರ್ಣ ಜಯಂತಿ ಶಹರ್ ರೋಜಗಾರ ಯೋಜನೆ ಅಡಿಯಲ್ಲಿ ಹಾಗೂ ಮಲ್ಲಿಕಾರ್ಜುನ ಗ್ರಾಮೀಣ ಅಭಿವೃದ್ಧಿ ಸ್ವಯಂ ಸೇವಾ ಸಂಸ್ಥೆ ಗುಲ್ಬರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರ ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮ ಸ್ವಂತ ಬಲದ ಮೇಲೆ ನಿಲ್ಲಬೇಕು ಎಂದರು. 10ನೇ ಪಾಸಾದ ಹೆಣ್ಣು ಮಕ್ಕಳಿಗಾಗಿ ಸರ್ಕಾರ ಈ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
 ಬಡ ವಿದ್ಯಾರ್ಥಿಗಳು ಸರ್ಕಾರದ ಈ ಸೌಲಭ್ಯವನ್ನು ಸದುಪಯೋಗವನ್ನು ಪಡೆಯಬೇಕೆಂದು ಮನವಿ ಮಾಡಿದರು. ಮಲ್ಲಿಕಾರ್ಜುನ ಗ್ರಾಮೀಣ ಅಭಿವೃದ್ಧಿ ಸ್ವಯಂ ಸೇವಾ ಸಂಸ್ಥೆಯ ಅಧ್ಯಕ್ಷೆ ಸವಿತಾ ಎಂ. ಸಜ್ಜನ್ ಮಾತನಾಡಿ, ಮಹಿಳೆ ಆರ್ಥಿಕ ಭದ್ರತೆ ಹೊಂದಿದಾಗ ಮಹಿಳಾ ಸಬಲೀಕರಣ ಸಾಧ್ಯ. ಮಹಿಳೆ ಧರ್ಮ, ಸಂಪ್ರದಾಯದ ಚೌಕಟ್ಟಿನಿಂದ ಹೊರಬಂದು ಅಕ್ಷರಸ್ಥರಾಗಬೇಕು. ಸರ್ಕಾರ ವಿವಿಧ ಯೋಜನೆಗಳ ಲಾಭ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.
  ಈ ಕಾರ್ಯಕ್ರಮದಲ್ಲಿ ಅಖಿಲ ಭಾರತ ಮಹಾಸಭಾ ಸದಸ್ಯ ಮಹೇಶ ಆನೆಗುಂದಿ, ಸಂಸ್ಥೆಯ ಅಧ್ಯಕ್ಷರಾದ ಜಾನ ಸನ್, ಶ್ಯಾಮಸುಂದರ್, ಸಂಚಾಲಕ ಕೋರಿ, ಶಿವಕುಮಾರ ಮಾಟಾಕುಂಟಿ, ಸುನಂದ ತಂಗಡಗಿ ಸೇರಿದಂತೆ  ಮತ್ತಿತರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.