ಸಮರ್ಪಕ ವಿದ್ಯುತ್, ನೀರಿಗಾಗಿ ಪ್ರತಿಭಟನೆ
ರಾಯಚೂರು: ಅಸಮರ್ಪಕ ವಿದ್ಯುತ್, ಕುಡಿಯುವ ನೀರಿನ ಪೂರೈಕೆ ಅವ್ಯವಸ್ಥೆ ಖಂಡಿಸಿ ಮಂಗಳವಾರ ನಗರದಲ್ಲಿ ಆಲ್ ಇಂಡಿಯಾ ಮಜ್ಸೀಲ್ ಎ ಇತ್ತೆಹಾದುಲ್ ಮುಸ್ಲಿಮೀನ್ ಸಂಘಟನೆ(ಎಐಎಂಐಎಂ)ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನಂತರ ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿ, ನಗರದ ಬಹುತೇಕ ಎಲ್ಲ ಪ್ರದೇಶದಲ್ಲಿ ವಿದ್ಯುತ್ ಕಡಿತ ನಿರಂತರವಾಗಿದೆ. ಹಾಗೆಯೇ ನಿವಾಸಿಗಳಿಗೆ ಸಮರ್ಪಕ ಕುಡಿಯುವ ನೀರು ದೊರೆಯುತ್ತಿಲ್ಲ ಎಂದು ಆರೋಪಿಸಿದರು.
ವಿವಿಧ ಬಡಾವಣೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ ಸಾಕಷ್ಟಿದೆ. ಚರಂಡಿ ಸ್ವಚ್ಛತೆ, ಸಮರ್ಪಕ ಕುಡಿಯುವ ನೀರೊದಗಿಸುವಲ್ಲಿ ಸ್ಥಳೀಯ ಆಡಳಿತ ಸಂಪೂರ್ಣ ವಿಫಲವಾಗಿದೆ. ಜನತೆಗೆ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ. ಈ ನಿಟ್ಟಿನಲ್ಲಿ ಕೂಡಲೇ ಎಚ್ಚೆತ್ತು ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಂಘಟನೆ ಅಧ್ಯಕ್ಷ ಮಹಮ್ಮದ್ ಶಾಹೇನ್ ರಜಾ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

