ಗೋದಾಮಿಗೆ ಬೆಂಕಿ: ಅಪಾರ ಹಾನಿ
ರಾಯಚೂರು: ಸಿಂಧನೂರು ನಗರದ ಅನುರಾಧಾ ಸಾರಿ ಸೆಂಟರ್ನ ಪಕ್ಕದ ಗಾದಿ ವ್ಯಾಪಾರದ ಅಂಗಡಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ. ಅಮೀನ್ ಸಾಬ್ ಎಂಬುವವರಿಗೆ ಸೇರಿದ ಗಾದಿ ವ್ಯಾಪಾರದ ಅಂಗಡಿಯ ಹಿಂಭಾಗದಲ್ಲಿರಿಸಿದ್ದ ಹರಳೆ ಗೋದಾಮಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹತ್ತಿ ಗೋದಾಮಿನಲ್ಲಿದ್ದ ಹರಳೆ, ಗಾದಿ ಬಟ್ಟೆ, ಶೆಡ್ ಹಾಗೂ ಅಕ್ಕಪಕ್ಕದ ಜೋಪಡಿಗೆ ಬೆಂಕಿ ತಗುಲಿ 2 ಲಕ್ಷ ನಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಧನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಟ್ಟೆನೋವು; ಆತ್ಮಹತ್ಯೆ
ರಾಯಚೂರು: ಲಿಂಗಸ್ಗೂರು ತಾಲೂಕಿನ ಗುರುಗುಂಟಾ ಗ್ರಾಮದಲ್ಲಿ ಹೊಟ್ಟೆನೋವು ತಾಳದೇ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ರಾಜೇಶ್ ಎಂದು ಗುರುತಿಸಲಾಗಿದೆ. ಈತ ಹೊಟ್ಟೆನೋವು ನಿಂದ ಬಳಲುತ್ತಿದ್ದು ಚಿಕಿತ್ಸೆ ಕೊಡಿಸಿದರೂ ಗುಣವಾಗಿರಲಿಲ್ಲ. ಇದರಿಂದ ಬೇಸತ್ತು ಆತ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದು ಚಿಕಿತ್ಸೆಗೆ ಬಾಗಲಕೋಟೆಗೆ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಕಿ ತಗುಲಿ ಮಹಿಳೆ ಸಾವು
ರಾಯಚೂರು: ಮಾನವಿ ತಾಲೂಕಿನ ಕಡದಿನ್ನಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಸುಟ್ಟ ಗಾಯಗಳಿಂದ ಬಳಲಿ ಮೃತಪಟ್ಟಿದ್ದಾಳೆ. ಮೃತಳನ್ನು ಶಾಹೀರಾ ಬೇಗಂ ಎಂದು ಗುರುತಿಸಲಾಗಿದೆ. ಈಕೆ ಗ್ರಾಮದಲ್ಲಿ ತನ್ನ ಗಂಡನ ಮನೆಯಲ್ಲಿ ಅಡುಗೆ ಮಾಡಲು ಸ್ಟೌ ಹಚ್ಚಲು ಹೋದಾಗ ಆಕಸ್ಮಿಕ ಬೆಂಕಿ ತಗುಲಿ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ವೇಳೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬಸ್ ಡಿಕ್ಕಿ: ವ್ಯಕ್ತಿ ಸಾವು
ರಾಯಚೂರು: ನಗರದ ಹೊರವಲಯದ ಅಸ್ಕಿಹಾಳ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದ್ದರಿಂದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತನನ್ನು ರಘುಪತಿ(30) ಎಂದು ಗುರುತಿಸಲಾಗಿದೆ. ಈತ ರಸ್ತೆ ಬದಿ ಸಾಗುತ್ತಿದ್ದ ವೇಳೆ ವೇಗವಾಗಿ ಬಂದ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

