ರಾಯಚೂರು

ಜಿಲ್ಲೆಯವರಿಗೆ ಸಚಿವ ಸ್ಥಾನ ನೀಡಿ

Published On :

ಮುದಗಲ್: ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಹಿಂದುಳಿದ ರಾಯಚೂರು ಜಿಲ್ಲೆಯ ಶಾಸಕರಿಗೆ ಕಾಂಗ್ರೆಸ್ ಸರ್ಕಾರ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ರಕ್ಷಣ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಮಹಾಜನ್ ಅವರಿಗೆ ಮಂಗಳವಾರ ಸಲ್ಲಿಸಿದರು. ಪ್ರತಿ ಸಲವೂ ಜಿಲ್ಲಾ ಉಸ್ತುವಾರಿ ಸಚಿವರನ್ನ ಬೇರೆ ಜಿಲ್ಲೆಯವರಿಗೆ ನೀಡಿ ಅಭಿವೃದ್ಧಿಗೆ ಹಿನ್ನಡೆಯಾಗುವಂತಾಗಿದೆ.
ಅಲ್ಲದೆ ಹೈ.ಕ. ಜಿಲ್ಲೆಗಳಲ್ಲಿ ಹೆಚ್ಚು ಕಾಂಗ್ರೆಸ್ ಶಾಸಕರು ಗೆದ್ದು ಬಂದಿರುವ ರಾಯಚೂರು ಜಿಲ್ಲೆಗೆ ಸರ್ಕಾರ ಮೊದಲ ಸಚಿವರ ಪಟ್ಟಿಯಲ್ಲಿ ಒಂದು ಸ್ಥಾನವನ್ನೂ ನೀಡದೆ ಅನ್ಯಾಯ ಮಾಡಿದೆ. ಆದರೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಕರವೇ ಘಟಕದ ಅಧ್ಯಕ್ಷ ಎಸ್.ಎ. ನಯಿಂ, ಎಸ್.ಎನ್.ಖಾದ್ರಿ, ಎಂ.ಡಿ. ಇಸ್ಮಾಯಿಲ್, ಸಾಬು ಹುಸೇನ, ಗ್ಯಾನಪ್ಪ ಚಲುವಾದಿ, ಅನ್ವರಮಿಯಾ, ರಹಿಮಾನ ದೂಲಿ, ಸಂತೋಷ, ಇಸಾಕ, ಮೋನು, ಬಾಬು ಉಪ್ಪಾರ, ಹಸನ, ಜಮೀರ್, ಸುಬಾಷ, ಹಬೀಬ ಸೇರಿದಂತೆ ಮುಂತಾದವರು ಈ ಸಂ ದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.