ರಾಯಚೂರು

ಸಂದರ್ಶನ ಮುಂದೂಡಿಕೆ

Published On :

ರಾಯಚೂರು: ಇಲ್ಲಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿಯಿದ್ದ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಸಂದರ್ಶನವನ್ನು ಮುಂದೂಡಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. ಈ ಕುರಿತು ವಿವಿಯ ಕುಲಸಚಿವರ ಕಚೇರಿ ಪ್ರಕಟಣೆ ನೀಡಿದ್ದು, ವಿವಿಧ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನಡೆಯಬೇಕಿದ್ದ ಸಂದರ್ಶನವನ್ನು ಹೈ.ಕ. ಭಾಗದಲ್ಲಿ 371ನೇ ಕಲಂ(ಜೆ) ಸವಲತ್ತು  ಜಾರಿಗೆ ಬರುವ ಹಿನ್ನೆಲೆ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಮೂಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ವಸತಿ ನಿಲಯ; ಅರ್ಜಿ ಆಹ್ವಾನ
ರಾಯಚೂರು: ಮಾನವಿ ಹಾಗೂ ಲಿಂಗಸ್ಗೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಖಾಲಿಯಿರುವ ಬಾಲಕ- ಬಾಲಕಿಯರ ವಿದ್ಯಾರ್ಥಿಗಳ ಸ್ಥಾನಗಳಿಗೆ  2013- 14ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರ್ಜಿಗಳನ್ನು ಉಚಿತವಾಗಿ ಪಡೆದು ಜೂ.5ರೊಳಗೆ ಆಯಾ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
25ರಂದು ಜಿಪಂ ಕೆಡಿಪಿ ಸಭೆ
ರಾಯಚೂರು: ಇಲ್ಲಿನ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯನ್ನು ಮೇ 25ರಂದು ಕರೆಯಲಾಗಿದೆ. ಅಂದು ಬೆಳಗ್ಗೆ 10ಕ್ಕೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ಜರುಗಲಿದ್ದು, ಜಿಪಂ ಅಧ್ಯಕ್ಷೆ ಲಲಿತಮ್ಮ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಜಿಪಂ ಸಿಇಒ ಕಚೇರಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.