ರಾಯಚೂರು

ಸ್ಥಾನ ನೀಡದ್ದಕ್ಕೆ ಬೇಸರ

Published On :

ದೇವದುರ್ಗ: ರಾಜ್ಯದಲ್ಲಿ ತೀರಾ ಹಿಂದುಳಿದ ರಾಯಚೂರು ಜಿಲ್ಲೆಗೆ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಲ್ಲಿ ನಿರ್ಲಕ್ಷಿಸಲಾಗಿದೆ. ಮಾಜಿ ಸಂಸದ ಹಾಗೂ ದೇವದುರ್ಗದ ಹಾಲಿ ಶಾಸಕ ಎ.ವೆಂಕಟೇಶ ನಾಯಕರಿಗೆ ಸಚಿವ ಸ್ಥಾನ ನೀಡದೆ ಜಿಲ್ಲೆಗೆ ಅನ್ಯಾಯ ಎಸಗಲಾಗಿದೆ ಎಂದು ವಿಎಸ್‌ಎಸ್‌ಎನ್ ನಿರ್ದೇಶಕ, ಕಾಂಗ್ರೆಸ್ ಯುವ ಮುಖಂಡ ಶಿವನಗೌಡ ಕುಪ್ಪಿ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಹೈ.ಕ.ದಲ್ಲಿ ಪರಿಶಿಷ್ಟ ಪಂಗಡದ 5 ಜನ ಶಾಸಕರಲ್ಲಿ ನಾಲ್ವರು ಕಾಂಗ್ರೆಸ್‌ನಿಂದ ಚುನಾಯಿತರಾಗಿದ್ದಾರೆ. ಇದರಲ್ಲಿ ಎ.ವೆಂಕಟೇಶ ನಾಯಕ ಅವರು ಕಳೆದ ನಾಲ್ಕು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದು ಕಾಂಗ್ರೆಸ್ ನಿಷ್ಠಾವಂತರಾಗಿದ್ದಾರೆ. ನಾಲ್ಕು ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದು, ಅಂಥ ವ್ಯಕ್ತಿಗೆ ಸಚಿವ ಸ್ಥಾನ ನಿರಾಕರಿಸಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂಥವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಚಿವ ಸ್ಥಾನ ನೀಡಬೇಕಿತ್ತು. ಪಕ್ಷದಲ್ಲಿನ ಹಿರಿತನ, ಜಾತಿ, ಮತ್ತು ಪ್ರತಿ ಜಿಲ್ಲೆಗೆ ಮಂತ್ರಿ ಸ್ಥಾನ ನೀಡುವ ನಿಟ್ಟಿನಲ್ಲಿ ಜಿಲ್ಲೆಯನ್ನು ಕಡೆಗಣಿಸಿದ್ದಾರೆಂದು ದೂರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.