ರಾಯಚೂರು

ಆಸ್ಪತ್ರೆಗೆ ಪ್ರಿಯಾಂಕ್ ಖರ್ಗೆ ಹಠಾತ್ ಭೇಟಿ

Published On :

ಕನ್ನಡಪ್ರಭ ವಾರ್ತೆ, ಚಿತ್ತಾಪುರ, ಮೇ 22
ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಶಾಸಕ ಪ್ರಿಯಾಂಕ್ ಖರ್ಗೆ ಮಂಗಳವಾರ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿನ ವ್ಯವಸ್ಥೆ ನೋಡಿ ಅಸಮಧಾನ ವ್ಯಕ್ತಪಡಿಸಿ 15 ದಿನಗಳ ಒಳಗಾಗಿ ಅವ್ಯವಸ್ಥೆ ಸರಿಪಡಿಸಿ ಎಂದು ಅಲ್ಲಿಯ ವೈದ್ಯರಿಗೆ ಸೂಚಿಸಿದರು.
ರೋಗಿಗಳ ಆರೋಗ್ಯ ವಿಚಾರಿಸಿ ರೋಗಿಗಳಿಗೆ ಸರ್ಕಾರದಿಂದ ಬರುವ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು. ರೋಗಿಗಳಿಗೆ ತೊಂದರೆಯಾಗದಂತೆ ಅಗತ್ಯ ಔಷಧಿಗಳನ್ನು ಪೊರೈಸಲು ಇಲಾಖೆ ಅಧಿಕಾರಿಗಳ ಜತೆಗೆ ಮಾತನಾಡುವುದಾಗಿ ಹೇಳಿದರು.  ಖಾಲಿ ಹುದ್ದೆಗಳ ಭರ್ತಿಗಾಗಿ ವೈದ್ಯಕಿಯ ಸಿಬ್ಬಂದಿ ಭರ್ತಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.  ಬ್ಲಾಕ್ ಅಧ್ಯಕ್ಷ ಭೀಮಣ್ಣ ಸಾಲಿ, ಡಾ. ಪ್ರಭುರಾಜ ಕಾಂತಾ, ಜಿಪಂ ಸದಸ್ಯ ರಮೇಶ ಮರಗೋಳ, ಎಪಿಎಂಸಿ ಅಧ್ಯಕ್ಷ ಶಿವಯೋಗಿ ಸಾಹು, ಶಿವಕುಮಾರ ಸುಲ್ತಾನಪುರ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.