ರಾಯಚೂರು

ವಿಶೇಷ ತರಬೇತಿ ಶಿಬಿರಕ್ಕೆ ಚಾಲನೆ

Published On :

ಗುಲ್ಬರ್ಗ: ಬುದ್ಧಿವಂತ ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದು ಸಾಮಾನ್ಯ. ಪಿಯು ಫೇಲಾದವರಿಗೆ ತರಬೇತಿ ನೀಡಿ ಉತ್ತೀರ್ಣರಾಗಲು ಮಾರ್ಗದರ್ಶನ ಮಾಡುತ್ತಿರುವ ಈಶಾನ್ಯ ವಲಯ ಶಿಕ್ಷಕರ ವೇದಿಕೆ ಕಾರ್ಯವು ಅತ್ಯುತ್ತಮ ಎಂದು ಮಂದೆವಾಲ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ. ಅನಂತರಾವ ಕುಲಕರ್ಣಿ ಶ್ಲಾಘಿಸಿದರು. ನಗರದ ಈಶಾನ್ಯ ವಲಯ ಶಿಕ್ಷಕರ ವೇದಿಕೆ ಕಾರ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ವಿಶೇಷ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವೇದಿಕೆಯ ಕಾರ್ಯಾಧ್ಯಕ್ಷ ಎಂ.ಬಿ. ಅಂಬಲಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನುತ್ತೀರ್ಣ ಹೊಂದಿರುವ ವಿದ್ಯಾರ್ಥಿಗಳು ದಡ್ಡರಲ್ಲ, ಅವರಿಗೆ ಮಾರ್ಗದರ್ಶನದ ಕೊರತೆ ಇರುತ್ತದೆ. ಈ ನಿಟ್ಟಿನಲ್ಲಿ ಅವರಿಗೆ ಪ್ರತಿದಿನ ಬೆಳಗ್ಗೆ 6.30 ರಿಂದ 2.30ರವರೆಗೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ ವಿಷಯಗಳ ತರಬೇತಿ ನೀಡಲಾಗುವುದು. ಉತ್ತೀರ್ಣರಾಗಲು ಮಾರ್ಗದರ್ಶನ ಮಾಡಲಾಗುವುದು ಎಂದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ತರಬೇತಿ ಪಡೆಯಲು ಬಯಸುವ ವಿದ್ಯಾರ್ಥಿಗಳು 9880169907ಗೆ ಸಂಪರ್ಕಿಸಬೇಕು ಎಂದರು.
ಪ್ರೊ. ಪ್ರಮೋದ ನಾಗೂರ, ಪ್ರೊ. ಮಹೇಶ ದೇಶಪಾಂಡೆ, ಭೀಮರಾವ ಪಾಟೀಲ್, ರಾಘವೇಂದ್ರ ಕಲ್ಯಾಣಕರ್, ಡಾ. ಶಿವರಾಜ ಬುಜರಕೆ ಇತರರು ಉಪಸ್ಥಿತರಿದ್ದರು. ಶಿವರಾಜ ಸ್ವಾಗತಿಸಿದರು. ಭೀಮರಾವ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.