ನಾಳೆ ಮುಂಗಾರು ಬೀಜ ದಿನೋತ್ಸವ
ರಾಯಚೂರು: ಇಲ್ಲಿನ ರಾಯಚೂರು ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಮೇ 25ರಂದು ಮುಂಗಾರು ಬೀಜ ದಿನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ನಗರದ ಕೃಷಿ ವಿವಿ ಆವರಣದಲ್ಲಿರುವ ಬೀಜ ಘಟಕದಲ್ಲಿ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ನಡೆಯುವ ಬೀಜ ದಿನೋತ್ಸವವನ್ನು ಕೃಷಿ ವಿವಿ ಕುಲಪತಿ ಡಾ. ಬಿ.ವಿ.ಪಾಟೀಲ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಯ ಸಂಶೋಧನಾ ನಿರ್ದೇಶಕ ಡಾ. ಬಿ.ಎಸ್. ಜನಗೌಡರ್, ವಿಸ್ತರಣಾ ನಿರ್ದೇಶಕ ಡಾ.ಕೆ.ಪಿ.ವಿಶ್ವನಾಥ್, ಸಹಸಂಶೋಧನಾ ನಿರ್ದೇಶಕ ಡಾ.ಶಂಕರಗೌಡ, ಸಹ ವಿಸ್ತರಣಾ ನಿರ್ದೇಶಕ ಡಾ.ಎಸ್.ಎನ್. ಹಂಚಿನಾಳ್ ಹಾಗೂ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಬಿ.ವೈ. ಶ್ರೀನಿವಾಸ್ ಪಾಲ್ಗೊಳ್ಳಲಿದ್ದಾರೆಂದು ಕೃಷಿ ವಿವಿ ಬೀಜ ಘಟಕದ ವಿಶೇಷ ಅಧಿಕಾರಿ ಡಾ.ಬಸವೇಗೌಡರು ತಿಳಿಸಿದ್ದಾರೆ. ಈ ಬೀಜ ದಿನೋತ್ಸವದಲ್ಲಿ ಸುಧಾರಿತ ತಳಿಗಳ ಬಿತ್ತನೆ ಬೀಜಗಳು, ಜೈವಿಕ ಪೀಡೆನಾಶಕಗಳು, ಜೈವಿಕ ಗೊಬ್ಬರ ಮತ್ತು ತೋಟಗಾರಿಕೆ ಗಿಡಗಳ ಮಾರಾಟ ಮಾಡಲಾಗುತ್ತದೆ. ಹೊಸತಳಿಗಳು ಮತ್ತು ಬೇಸಾಯ ಕ್ರಮಗಳು, ಸಮಗ್ರ ಬೀಜೋತ್ಪಾದನೆ ಮತ್ತು ಕೃಷಿ ಪದ್ಧತಿ, ಸಮಗ್ರ ಕೀಟ ಮತ್ತು ರೋಗಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಅದೇ ರೀತಿ ವಿವಿಧ ವಿಜ್ಞಾನಿಗಳು ಮತ್ತು ರೈತರು ಮಧ್ಯೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

