ರಾಯಚೂರು

ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ: ಹಿರೇಮಠ

Published On :

ಲಿಂಗಸ್ಗೂರು: ಐತಿಹಾಸಿಕ ಪ್ರಸಿದ್ಧ ಸುಕ್ಷೇತ್ರ ಅಮರೇಶ್ವರ ದೇವರ ಚರಿತ್ರೆ ಆಧಾರಿತ ಅಮರೇಶ್ವರ ಮಹಾತ್ಮೆ ಭಕ್ತಿ ಪ್ರಧಾನ ಚಲನಚಿತ್ರ ಪ್ರದರ್ಶನ ಯಶಸ್ವಿಯಾಗಿ ನಡೆಯುತ್ತಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಚಲನಚಿತ್ರ ನಿರ್ಮಾಪಕ ಬಸವರಾಜ ಹಿರೇಮಠ ಸ್ಪಷ್ಟಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜೂನ್ ತಿಂಗಳ ಮೊದಲ ವಾರದಲ್ಲಿ ಚಿತ್ರ ಪ್ರದರ್ಶನ 50ನೇ ದಿನಕ್ಕೆ ಕಾಲಿಡಲಿದ್ದು, ಆಧ್ಯಾತ್ಮಿಕ, ಧಾರ್ಮಿಕ ಚರಿತ್ರೆಯುಳ್ಳ ಚಲನಚಿತ್ರವಾದ ಪ್ರಯುಕ್ತ ಎಲ್ಲ ಸಮಾಜ ವರ್ಗದವರು ಚಲನಚಿತ್ರ ವೀಕ್ಷಣೆಗೆ ಆಸಕ್ತಿ ತೋರುತ್ತಿದ್ದಾರೆ. ಇದರ ಪ್ರಯುಕ್ತ ಅದ್ಧೂರಿ ಸಮಾರಂಭ ಏರ್ಪಡಿಸಲಾಗುವುದು ಎಂದರು. ರಾಜ್ಯದ ಚಿತ್ರರಂಗದಲ್ಲಿ ಸ್ಪರ್ಧೆ ಹೆಚ್ಚಾಗಿದ್ದು, ಪ್ರತಿವಾರ 2 ರಿಂದ 3 ಚಿತ್ರಗಳು ತೆರೆ ಕಾಣುತ್ತಿವೆ. ಇದರಿಂದ ಚಿತ್ರಮಂದಿರಗಳ ಅಭಾವ ಉಂಟಾಗಿದೆ. ಪರಭಾಷೆ ಚಿತ್ರಗಳ ಹಾವಳಿ ಇದ್ದರೂ ಇನ್ನು ಕೆಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ಮಾಡುವ ಉದ್ದೇಶ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ ಈ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದ ಅವರು ಅಮರೇಶ್ವರ ಮಹಾತ್ಮೆ ಚಿತ್ರದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನವಾಗಿದೆ ಎಂದು ಚಿತ್ರ ನಿರ್ಮಾಪಕ ಬಸವರಾಜ ಹಿರೇಮಠ ತಿಳಿಸಿದರು. ಈ ಸಂದರ್ಭದಲ್ಲಿ ಚಿತ್ರದ ಕಾರ್ಯಕಾರಿ ನಿರ್ಮಾಪಕ ದೊಡ್ಡಬಸಪ್ಪ (ಶಿವಶಕ್ತಿ) ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.