ರಾಯಚೂರು

ಹೊಟ್ಟೆನೋವು: ಯುವತಿ ಆತ್ಮಹತ್ಯೆ

Published On :

ರಾಯಚೂರು: ಲಿಂಗಸ್ಗೂರು ತಾಲೂಕಿನ ಕನ್ನಾಪೂರಹಟ್ಟಿ ಗ್ರಾಮದಲ್ಲಿ ಹೊಟ್ಟೆನೋವು ತಾಳದೇ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳನ್ನು ಗ್ರಾಮದ ಹುಲ್ಲಮ್ಮ ಎಂದು ಗುರುತಿಸಲಾಗಿದೆ. ಈಕೆ ಕಳೆದ ಅನೇಕ ದಿನಗಳಿಂದ ಹೊಟ್ಟೆನೋವುನಿಂದ ಬಳಲುತ್ತಿದ್ದು ಅದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಾಗ ಆಕೆಯನ್ನು ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವನಾಗದೇ ಸಾವಿಗೀಡಾಗಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
11 ಚಿನ್ನದ ನಾಣ್ಯ ಜಪ್ತಿ
ರಾಯಚೂರು: ಸಿಂಧನೂರು ನಗರದ ಉಪ್ಪಾರವಾಡಿಯ ಶರಣಪ್ಪ ಎಂಬುವವರ ಮನೆಯ ಬುನಾದಿ ಅಗೆಯುತ್ತಿದ್ದ ವೇಳೆ 11 ಚಿನ್ನದ ನಾಣ್ಯ ಗಳು ದೊರೆತಿದ್ದು, ಅವುಗಳನ್ನು ಬಚ್ಚಿಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೂಲಿಕಾರ್ಮಿಕರಾದ ರುದ್ರಪ್ಪ ಮತ್ತು ಗಾದಿಲಿಂಗಪ್ಪ ಎಂದು ಗುರುತಿಸಲಾಗಿದೆ. ಇವರು ಉಪ್ಪಾರವಾಡಿಯಲ್ಲಿ ಮೇ 12ರಂದು ಬುನಾದಿ ಅಗೆಯುವ ಕಾರ್ಯದಲ್ಲಿದ್ದಾಗ 36.790 ಗ್ರಾಂ ತೂಕದ 11 ಚಿನ್ನದ ಹಳೆಯ ಕಾಲದ ನಾಣ್ಯಗಳು ದೊರೆತಿದ್ದು, ಅವುಗಳನ್ನು ಈ ಇಬ್ಬರು ಮಾಡಸಿರವಾರ ಗ್ರಾಮದಲ್ಲಿನ ತಮ್ಮ ಮನೆಯಲ್ಲಿ ಬಚ್ಚಿಟ್ಟ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದ್ದು ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ ಚಿನ್ನದ ನಾಣ್ಯ ಜಪ್ತಿ ಮಾಡಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ಜೂಜು: ಐವರ ಬಂಧನ
ರಾಯಚೂರು: ತಾಲೂಕಿನ ಗಣಮೂರ ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗ್ರಾಮದ ತಿಮ್ಮಪ್ಪ, ಮಲ್ಲೇಶಪ್ಪ, ಮಲ್ಲೇಶಿ, ತಂಬಾಕ ಮಲ್ಲೇಶಿ ಮತ್ತು  ವೆಂಕಟರಾಮ ಎಂದು ಗುರುತಿಸಲಾಗಿದೆ. ಇವರು ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ 618 ರು. ಜಪ್ತಿ ಮಾಡಿದ್ದಾರೆ.ಈ ಕುರಿತು ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.