ಅಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯ
ರಾಯಚೂರು: ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸದ ಮತ್ತು ವಸತಿ ನಿಲಯಗಳ ಮೇಲ್ವಿಚಾರಕರ ಮೇಲೆ ಕ್ರಮ ಕೈಗೊಳ್ಳಲು ವಿಫಲರಾಗಿರುವ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಈ ಕುರಿತು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಈಚೆಗೆ ದೂರು ಸಲ್ಲಿಸಿರುವ ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕ ಶರಣಪ್ಪ ದಿನ್ನಿ, ಸರ್ಕಾರ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳ ಅನುಕೂಲಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಕೆಳಹಂತದ ಅಧಿಕಾರಿಗಳು ಅಂಥ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸುವ ಕಾರ್ಯ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಸಮಸ್ಯೆಗಳ ಬಗ್ಗೆ ದೂರು ಹೇಳಲು ತೆರಳುವ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಮೇಲ್ವಿಚಾರಕರು ಬೆದರಿಕೆಯೊಡ್ಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ದೊರಕಿಸುವಂತೆ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

