ಅಮಾನತು ಆದೇಶ ರದ್ದತಿಗೆ ಆಗ್ರಹ
ಕನ್ನಡಪ್ರಭ ವಾರ್ತೆ, ರಾಯಚೂರು, ಮೇ 24
ತಾಲೂಕಿನ ಯರಗೇರಾ ಗ್ರಾಪಂ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಿದ ಆದೇಶ ಹಿಂಪಡೆಯಬೇಕು ಹಾಗೂ ವಸತಿ ಯೋಜನೆಯ ಫಲಾನುಭವಿಗಳಿಗೆ ಚೆಕ್ ವಿತರಿಸುವಂತೆ ಆಗ್ರಹಿಸಿ ಶುಕ್ರವಾರ ಯರಗೇರಾ ಗ್ರಾಮದ ಫಲಾನುಭವಿಗಳು ಜಿಪಂ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಜಿಪಂ ಸಿಇಒಗೆ ಮನವಿ ಸಲ್ಲಿಸಿದ ಗ್ರಾಮಸ್ಥರು, 2011-12ನೇ ಸಾಲಿನಲ್ಲಿ ಇಂದಿರಾ ಆವಾಸ್ ಯೋಜನೆ ಅಡಿ ಗ್ರಾಮಕ್ಕೆ ಮಂಜೂರಾದ ಮನೆಗಳಿಗೆ ಫಲಾನುಭವಿಗಳ ಆಯ್ಕೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಗ್ರಾಮಸಭೆಯ ಮೂಲಕವೇ ಆಯ್ಕೆ ಮಾಡಲಾಗಿದೆ. ಈಗಾಗಲೇ ಕೆಲವರು ಮನೆ ನಿರ್ಮಿಸಿಕೊಂಡಿದ್ದು, ಕೆಲವರ ಮನೆಗಳ ಕಾಮಗಾರಿ ಜಾರಿಯಲ್ಲಿದೆ ಎಂದು ತಿಳಿಸಿದರು.
ಗ್ರಾಪಂ ಸದಸ್ಯ ಅಜೀಜ್ ಅವರು ಗ್ರಾಪಂ ಪಿಡಿಒ ವಿರುದ್ಧ ಮಾಡಿದ ಆರೋಪ ಸತ್ಯಕ್ಕೆ ದೂರವಾಗಿದ್ದು, ಕೂಡಲೇ ಜಿಪಂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ವಸ್ತು ಸ್ಥಿತಿ ಪರಿಶೀಲಿಸಿ ಫಲಾನುಭವಿಗಳಿಗೆ ವಸತಿ ಯೋಜನೆಯ ಚೆಕ್ಗಳನ್ನು ವಿತರಿಸುವಂತೆ ಆಗ್ರಹಿಸಿದರು.
ಗ್ರಾಪಂ ಅಧ್ಯಕ್ಷ ರಾಮಪ್ಪ ನಾಯಕ, ನಲ್ಲಾರೆಡ್ಡಿ ನಾಯಕ, ಉರುಕುಂದಪ್ಪ, ಫಾರೂಕ್ ಹುಸೇನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

