ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಶಾಸಕ ಪಾಟೀಲ್
ಕನ್ನಡಪ್ರಭ ವಾರ್ತೆ , ಮಸ್ಕಿ , ಮೇ 25
ಕ್ಷೇತ್ರದ ಮತದಾರರ ತಮ್ಮ ಮೇಲೆ ಇರಿಸಿರುವ ನಂಬಿಕೆಯನ್ನು ಹುಸಿಗೊಳಿಸದೇ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ಅವರು ಪಟ್ಟಣದ ಕವಿತಾಳ ರಸ್ತೆಯ ಹತ್ತಿರದ ಚಿಕ್ಕಸೌದತ್ತಿ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿ 50 ಲಕ್ಷ ವೆಚ್ಚದ ಯಾತ್ರಿ ನಿವಾಸದ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದ ನಂತರ ದೇವಸ್ಥಾನದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನಿರ್ಮಾಣಕ್ಕೆ ಚಾಲನೆ: ಈ ಹಿಂದೆ ಶಾಸಕರಾಗಿದ್ದ ಅವಧಿಯಲ್ಲಿ ಬುದ್ದಿನ್ನಿ ಗ್ರಾಮದಲ್ಲಿ 1.50 ಕೋಟಿ ವೆಚ್ಚದಲ್ಲಿ, ಸಂತೆಕಲ್ಲೂರಿನಲ್ಲಿ 60 ಲಕ್ಷ, ವೆಚ್ಚದಲ್ಲಿ ಮಸ್ಕಿಯ ಭ್ರಮರಾಂಬಾ ದೇವಸ್ಥಾನದ ಆವರಣದಲ್ಲಿ 60 ಲಕ್ಷ, ಅಂಕಲಿಮಠದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ವಿವಿಧ ಸ್ಥಳಗಳಲ್ಲಿ ಯಾತ್ರಿ ನಿವಾಸ್ ನಿರ್ಮಾಣಕ್ಕೆ ಚಾಲನೆ ನೀಡಿರುವುದಾಗಿ ತಿಳಿಸಿದರು.
ರಸ್ತೆ ನಿರ್ಮಾಣ, ಕುಡಿಯುವ ನೀರಿನ ಸೌಲಭ್ಯ ಮುಂತಾದ ಮೂಲ ಸೌಲಭ್ಯಗಳ ಬೇಡಿಕೆಯನ್ನಿಟ್ಟಿರುವ ದೇವಸ್ಥಾನದ ಸಮಿತಿಯ ಮನವಿಯನ್ನು ಆದ್ಯತೆಯ ಮೇರೆಗೆ ಮುಂದಿನ ದಿನಗಳಲ್ಲಿ ಈಡೇರಿಸುವುದಾಗಿ ಭರವಸೆ ನೀಡಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಮೂಲಕ ಜನರ ವಿಶ್ವಾಸವನ್ನು ಉಳಿಸಿಕೊಳ್ಳುವುದಾಗಿ ತಿಳಿಸಿದರು.
ಬಂಜಾರಾ ಸಮಾಜದ ರಾಜ್ಯಾಧ್ಯಕ್ಷ ಪಾಂಡುರಂಗ ಕೊಮ್ಮಾರ ಮಾತನಾಡಿ, ದೇವಸ್ಥಾನದ ಹತ್ತಿರ 20 ಜನತಾ ಮನೆಗಳನ್ನು ಮಂಜೂರು ಮಾಡುವಂತೆ ಮನವಿ ಮಾಡಿ ದೇವಸ್ಥಾನದ ಅಭಿವೃದ್ಧಿಯಲ್ಲಿ ಎಲ್ಲರ ಪಾತ್ರ ಮಹತ್ವದ್ದಾಗಿದೆ ಎಂದು ನುಡಿದರು.
ಜಿಪಂ ಸದಸ್ಯ ಮಹದೇವಪ್ಪಗೌಡ ಪೊಲೀಸ್ ಪಾಟೀಲ್, ಎಚ್.ಬಿ. ಮುರಾರಿ, ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂದಾನೆಪ್ಪ ಗುಂಡಳ್ಳಿ, ಎಪಿಎಂಸಿ ಅಧ್ಯಕ್ಷ ಮಂಜುನಾಥ ಪಾಟೀಲ್, ಹೈ.ಕ. ವಿಮೋಚನಾ ಸಮಿತಿಯ ಕಾರ್ಯದರ್ಶಿ ಬಸವಂತರಾಯ ಕುರಿ, ಡಾ. ಬಿ.ಎಚ್.ದಿವಟರ್, ಡಾ. ಶಿವಶರಣಪ್ಪ ಇತ್ಲಿ, ಮಾಜಿ ಜಿಪಂ ಸದಸ್ಯ ದೊಡ್ಡಪ್ಪ ಮಸ್ಕಿ, ಸುರೇಶ ಹರಸೂರು, ಮಲ್ಲಯ್ಯ, ರಾಮಜೀ ಕೋರೆಕರ್, ಮಲ್ಲಪ್ಪ ಉದ್ಬಾಳ್, ಅಪ್ಪಾಜಿಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

