ಇಂದಿನಿಂದ 'ಲೋಕಾ' ಪ್ರವಾಸ
ರಾಯಚೂರು: ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಮೇ 27ರಿಂದ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಮೇ 27ರಂದು ದೇವದುರ್ಗದ ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 28ರಂದು ಮಾನವಿಯ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಂದ ದೂರು ಮತ್ತು ಅಹವಾಲು ಸ್ವೀಕರಿಸಲಿದ್ದಾರೆಂದು ಲೋಕಾಯುಕ್ತರ ಕಚೇರಿ ತಿಳಿಸಿದೆ. ಕುಂದು ಕೊರತೆಗಳ ಮತ್ತು ದೂರಿನ ಬಗ್ಗೆ ಅರ್ಜಿಗಳನ್ನು ಸಾರ್ವಜನಿಕರು ಸ್ಥಳದಲ್ಲಿಯೇ ನೀಡಿ ಸದುಪಯೋಗ ಪಡೆಯಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ದೂ. 08532- 223592, 223576 ಇಲ್ಲಿಗೆ ಸಂಪರ್ಕಿಸಬಹುದು ಎಂದು ಕಚೇರಿ ತಿಳಿಸಿದೆ.
ಮೂಲ ಸೌಲಭ್ಯ: ಇಂದು ಧರಣಿ
ರಾಯಚೂರು: ನಗರದ ವಾರ್ಡು ಸಂಖ್ಯೆ 27ರ ನೀರಬಾವಿ ಕುಂಟಾದಲ್ಲಿ ದಲಿತ ಛಲವಾದಿ ಕುಟುಂಬಗಳಿಗೆ ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಹಾಗೂ ವಾರ್ಡಿನಲ್ಲಿ ವಾಂಬೆ ಯೋಜನೆ ಅಡಿ ಮನೆಗಳ ನಿರ್ಮಾಣಕ್ಕೆ ಒತ್ತಾಯಿಸಿ ಅಂಬೇಡ್ಕರ್ ಜಾಗೃತಿ ಸಂಘದಿಂದ ಮೇ 27ರಂದು ಧರಣಿ ಆಯೋಜಿಸಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಶಾಂತಕುಮಾರ್, ಅಂದು ಬೆಳಗ್ಗೆ 10ಕ್ಕೆ ನಗರದ ವಾರ್ಡ್ 27ರ ನಾಗಮ್ಮ ಶೇಷಪ್ಪ ಶಾಲೆಯ ಮೈದಾನದಿಂದ ರ್ಯಾಲಿಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಧರಣಿ ನಡೆಸಿ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಜೂ.1ರಂದು ಜನಸ್ಪಂದನ ಸಭೆ
ರಾಯಚೂರು: ರಾಜ್ಯ ಸರ್ಕಾರ ಗ್ರಾಪಂ ವ್ಯಾಪ್ತಿಯ ದೊಡ್ಡ ಗ್ರಾಮಗಳಲ್ಲಿ ಜನಸ್ಪಂದನ ಸಭೆಯನ್ನು ಆಯೋಜಿಸಲು ಸೂಚಿಸಿರುವುದರಿಂದ ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದಲ್ಲಿ ಜೂ.1ರಂದು ಈ ಸಭೆಯನ್ನು ಆಯೋಜಿಸಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ದೇವದುರ್ಗ ತಹಸೀಲ್ದಾರರರು, ತಾಲೂಕು ಮಟ್ಟದ ಅಧಿಕಾರಿಗಳು ಅಂದು ಬೆಳಗ್ಗೆ 11ಕ್ಕೆ ಸಭೆಯಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ.
ಗೊರೇಬಾಳ
ರಾಜಿನಾಮೆ
ಸಿಂಧನೂರು: ಸಿಂಧನೂರಿನ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎನ್. ಶಿವನಗೌಡ ಗೊರೇಬಾಳ ವಿದಾಯ ಹೇಳಿರುವ ಹಿನ್ನೆಲೆಯಲ್ಲಿ ಲಿಂಗಸ್ಗೂರು ಸ. ಆಯುಕ್ತ ಟಿ.ಯೋಗೇಶ ಪ್ರಭಾರಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಆದೇಶದನ್ವಯ ಈ ಸ್ಥಾನವನ್ನು ವಹಿಸಿಕೊಡಿರುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

