ದಾಖಲೆ ಸಲ್ಲಿಕೆಗೆ ಸೂಚನೆ
ರಾಯಚೂರು: ನಗರದಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಆದರ್ಶ ವಿದ್ಯಾಲಯಕ್ಕೆ ಪ್ರವೇಶ ಪಡೆಯಲು ಈಗಾಗಲೇ ಪ್ರವೇಶ ಪರೀಕ್ಷೆ ನಡೆಸಿದ್ದು, ಅದರಲ್ಲಿ ಆಯ್ಕೆಯಾದ 80 ವಿದ್ಯಾರ್ಥಿಗಳಿಗೆ ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿದೆ.
ದಾಖಲೆಗಳನ್ನು ಮೇ 27ರಿಂದ ಜೂ. 30ರವರೆಗೆ ಸಲ್ಲಿಸಿ ಪ್ರವೇಶ ಪಡೆಯಬಹುದು. ಜೂ. 30ರ ನಂತರದಲ್ಲಿ ಕಾಯ್ದಿರಿಸಿದ ಪಟ್ಟಿಯಲ್ಲಿನ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಪ್ರವೇಶಕ್ಕೆ ಪರಿಗಣಿಸಲಾಗುತ್ತದೆ. ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾದ 80 ವಿದ್ಯಾರ್ಥಿಗಳ ಪಟ್ಟಿ ರಾಜ್ಯ ಯೋಜನಾ ನಿರ್ದೇಶಕರು ಬಿಡುಗಡೆ ಮಾಡಿದ್ದು, ಅರ್ಹರು ಪ್ರವೇಶಕ್ಕೆ ಮುಂದಾಗುವಂತೆ ಸೂಚನೆ ನೀಡಿದ್ದಾರೆ.
ಅಭ್ಯರ್ಥಿಗಳು ಶಾಲೆಯ ಅವಧಿಯಲ್ಲಿ ದಾಖಲೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಶಾಲೆಯ ಮುಖ್ಯ ಶಿಕ್ಷಕರನ್ನು ಮೊಬೈಲ್ ದೂರವಾಣಿ ಸಂಖ್ಯೆ- 9741682006 ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.
30ರಂದು ಕಾರ್ಮಿಕ ದಿನಾಚರಣೆ
ಸಿಂಧನೂರು: ನಗರದ ಗಂಜ್ ಹಮಾಲರ ಸಂಘದ ನೇತೃತ್ವದಲ್ಲಿ ಮೇ 30ರಂದು 127ನೇ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಹಮಾಲರ ಸಂಘದ ಅಧ್ಯಕ್ಷ ಬಾಷುಮಿಯಾ, ಕಾರ್ಯದರ್ಶಿ ಶರಣಪ್ಪ ಗೊರೇಬಾಳ ತಿಳಿಸಿದ್ದಾರೆ.
ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ, 11 ಗಂಟೆಗೆ ಬಹಿರಂಗ ಸಭೆ ಜರುಗಲಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕ ಬಂಧುಗಳು ಆಗಮಿಸಬೇಕೆಂದು ವಿನಂತಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

