'ಕಾರ್ಯದಲ್ಲಿ ಶ್ರದ್ಧೆಯಿದ್ದರೆ ವ್ಯಕ್ತಿ ಉನ್ನತ ಸ್ಥಾನಕ್ಕೆ'
ಸಿಂಧನೂರು: ತಾನು ಮಾಡುವ ಕಾರ್ಯದಲ್ಲಿ ಶ್ರದ್ಧೆ, ಭಕ್ತಿಯಿದ್ದರೆ ವ್ಯಕ್ತಿ ಉನ್ನತ ಸ್ಥಾನಕ್ಕೇರುತ್ತಾನೆ ಎಂದು ರಂಭಾಪುರಿ ಶಾಖಾಮಠ ಕರಿಬಸವನಗರದ ಸೋಮನಾಥ ಶಿವಾಚಾರ್ಯರು ಅಭಿಪ್ರಾಯಪಟ್ಟರು.
ಜವಳಗೇರಾ ಗ್ರಾಮದ ಮಾರುತಿ ನಗರದಲ್ಲಿ ಅಭಯ ಹಸ್ತ ಆಂಜನೇಯ ದೇವಸ್ಥಾನದಲ್ಲಿ ಜರುಗಿದ ಕಳಸಾರೋಹಣ ಮತ್ತು ಗರಡುಗಂಭ ಸ್ಥಾಪನೆಯ ಕಾರ್ಯಕ್ರಮದಲ್ಲಿ ಭಕ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಧಾರ್ಮಿಕ ಕಾರ್ಯಕ್ರಮಗಳು ನೆಮ್ಮದಿ ನೀಡುತ್ತವೆ. ಪ್ರತಿಯೊಬ್ಬ ಮನುಷ್ಯನು ಪರಂಪರೆಯ ಹಿನ್ನೆಲೆಯಲ್ಲಿ ವೈಜ್ಞಾನಿಕ ಜೀವನ ನಡೆಸುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಕರೆ ನೀಡಿದರು.
ಜವಳಗೇರ ನಾಗಲಿಂಗತಾತ ಮಠದ ಸೂರ್ಯನಾರಾಯಣ ಶ್ರೀಗಳು ಮಾತನಾಡಿ, ಧಾರ್ಮಿಕ ಕಾರ್ಯಕ್ರಮಗಳು ದೇವರ ಆಶೀರ್ವಾದಗಳಿಂದ ನಡೆಯುತ್ತವೆ. ಜೀವನ ಮಾಡುವುದೇ ದುಸ್ತರವಾಗಿರುವಾಗ ಸನ್ನಿವೇಶದಲ್ಲಿ ಇಂತಹ ಕಾರ್ಯಗಳು ಅಭಯಹಸ್ತನಾಗಿರುವ ಆಂಜನೇಯ ಸ್ವಾಮಿಯ ಸಂಪೂರ್ಣ ಆಶೀರ್ವಾದದಿಂದ ಜರುಗಿವೆ. ಜವಳಗೇರಾ ಗ್ರಾಮದ ಸಮಸ್ತ ಭಕ್ತರೂ ಇದಕ್ಕೆ ಪಾತ್ರರಾಗಿದ್ದಾರೆ ಎಂದರು.
ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಅರ್ಚಕ ನವಲಿ ಭೀಮಾಚಾರ್ಯ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಈ ವೇಳೆ ದೇವಸ್ಥಾನಕ್ಕೆ ವಿವಿಧ ರೀತಿಯಲ್ಲಿ ಸೇವೆಯನ್ನು ಸಲ್ಲಿಸಿದ ಭಕ್ತರಿಗೆ ಉಭಯ ಶ್ರೀಗಳಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ದೇವಸ್ಥಾನ ವ್ಯವಸ್ಥಾಪಕ ಸಿಂಗಾಪುರ ವೆಂಕಯ್ಯ ಶ್ರೇಷ್ಠಿ ದಂಪತಿಗಳಿಗೆ ವಿಶೇಷವಾಗಿ ಸನ್ಮಾನಿಸಲಾಯಿತು.
ಭಾನುವಾರ ಸಾಯಂಕಾಲ ಗೋಧೂಳಿ ಸಮಯದಲ್ಲಿ ವೆಂಕಟೇಶ್ವರ ದೇವಸ್ಥಾನದಿಂದ ಬಾಜಾ ಭಜಂತ್ರಿ, ಪೂರ್ಣ ಕುಂಭಗಳಿಂದ ಮೆರವಣಿಗೆಯ ಮುಖಾಂತರ ಕಳಸ ವೇದ ಮೇಳದಿಂದ ಜರುಗಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

