ರಾಯಚೂರು

ಜೂ. 5ರಂದು ಮುದಗಲ್ನಲ್ಲಿ ಧರಣಿ

Published On :

ಮುದಗಲ್: ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನೂತನ ಕಾಂಗ್ರೆಸ್ ಸರ್ಕಾರವು ಈ ಭಾಗದ ರೈತರ ಜೀವನಾಡಿಯಾದ ನಂದವಾಡಗಿ ಏತ ನೀರಾವರಿ ಯೋಜನೆಯ ಕಾಮಗಾರಿಗೆ ಶೀಘ್ರವೇ ಚಾಲನೆ ನೀಡಬೇಕೆಂದು ಒತ್ತಾಯಿಸಿ ಜೂನ್ 5ರಂದು ಮುದಗಲ್ ಪಟ್ಟಣದ ಬೈಪಾಸ್ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಎರಡು ದಿನಗಳ ಕಾಲ ಧರಣಿ ಸತ್ಯಾಗ್ರಹವನ್ನು ಕರ್ನಾಟಕ ರಾಜ್ಯ ರೈತಸಂಘ ಮತ್ತು ವಿಶ್ವ ಪರಿವರ್ತನಾ ಟ್ರಸ್ಟ್, ಬೆಂಗಳೂರು ಜಂಟಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಮತ್ತು ಪರಿವರ್ತನಾ ಟ್ರಸ್ಟ್ ಸಂಚಾಲಕ ಇಂಜಿನಿಯರ್ ಮಲ್ಲೇಶಗೌಡ ತಿಳಿಸಿದ್ದಾರೆ.
ಕಾಮಗಾರಿಗೆ ಚಾಲನೆ ಒತ್ತಾಯ: ಅವರು ಪಟ್ಟಣದಲ್ಲಿ ಕರೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದಿನ ಬಿಜೆಪಿ ಸರ್ಕಾರವು ನಂದವಾಡಗಿ ಏತ ನೀರಾವರಿ ಯೋಜನೆಗೆ ಬಜೆಟ್ನಲ್ಲಿ ಅಂದಿನ ಮುಖ್ಯಮಂತ್ರಿ ಡಿ.ವಿ. ಸದಾನಂದನಗೌಡರು ಹಣವನ್ನು ಮೀಸಲಿಟ್ಟು ರೈತ ಕನಸನ್ನು ನನಸು ಮಾಡುವ ಆಶೆಯನ್ನು ಹುಟ್ಟಿಸಿದರು. ನಂತರದ ಬದಲಾದ ರಾಜಕೀಯ ಸನ್ನಿವೇಶದಲ್ಲಿ ರಾಜ್ಯದಲ್ಲಿ ನೂತನವಾಗಿ ರೈತಪರ ಹೋರಾಟಗಾರರಾದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅಲ್ಲದೇ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಹೇಳಿದಂತೆ ಕೃಷ್ಣಾ ಯೋಜನೆಯ ಏತ ನೀರಾವರಿ ಯೋಜನೆಗಳನ್ನು ಸಂಪೂರ್ಣಗೊಳಿಸುವ ಭರವಸೆಗೆ ನಂದವಾಡಗಿ ಏತ ನೀರಾವರಿ ಯೋಜನೆ ಕಾಮಗಾರಿಗೆ ಚಾಲನೆ ನೀಡಬೇಕೆಂದು ಅವರು ಒತ್ತಾಯಿಸಿದರು. ರೈತರಿಗೆ ಇಂದು ಹೋರಾಟ ಅನಿವಾರ್ಯವಾಗಿದ್ದು, ಈ ಯೋಜನೆಯಿಂದ ಹುನಗುಂದ ತಾಲೂಕಿನ 5, ಲಿಂಗಸ್ಗೂರು ತಾಲೂಕಿನ 33, ಮಾನವಿ ತಾಲೂಕಿನ 18 ಗ್ರಾಮಗಳು ಏತ ನೀರಾವರಿ ಯೋಜನೆಗೆ ಒಳಪಟ್ಟು ಒಟ್ಟು 14.5 ಟಿಎಂಸಿ ನೀರಿನಿಂದ 33 ಸಾವಿರ ಹೆಕ್ಟೇರ್ ಪ್ರದೇಶ ನೀರು ಹರಿಯಲಿದೆ ಎಂದರು.
 ಹಮ್ಮಿಕೊಂಡಿರುವ ಈ ಧರಣಿ ಸತ್ಯಾಗ್ರಹದಲ್ಲಿ ಪಕ್ಷ ಭೇದ ಮರೆತು ಈ ಭಾಗದ ಎಲ್ಲ ಜನಪ್ರತಿನಿಧಿಗಳು, ಸಂಘಟನೆಕಾರರು, ಹೋರಾಟಕಾರರು, ತಾಲೂಕಿನ ಶಾಸಕರುಗಳು ಭಾಗವಹಿಸಿ ರೈತರ ಹೋರಾಟ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.   ಈ ಭಾಗದ ಶಾಸಕರು, ಸಂಸತ್ ಸದಸ್ಯರುಗಳು ಸರ್ಕಾರದ ಮೇಲೆ ಒತ್ತಡ ಹೇರಿ ಯೋಜನೆಯ ಕಾಮಗಾರಿ ಚಾಲನೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಅವರು ಮನವಿ ಮಾಡಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.