ರಾಯಚೂರು

ಕಾಲೇಜು ಪ್ರವೇಶ ಶುಲ್ಕ ಬಹಿರಂಗಪಡಿಸಿ

Published On :

ಸಿಂಧನೂರು: ಸಿಂಧನೂರು ತಾಲೂಕಿನ ಪದವಿಪೂರ್ವ ಕಾಲೇಜುಗಳು ಪಡೆಯುವ ಶುಲ್ಕ ಹಾಗೂ ಡೊನೇಷನ್ ಮೊತ್ತವನ್ನು ಕಾಲೇಜಿನ ನೋಟಿಸ್ ಬೋರ್ಡ್‌ನಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿತು.
ಕಾಲೇಜಿನ ಪ್ರಚಾರಕ್ಕಾಗಿ ಬಳಸುವ ಫ್ಲೆಕ್ಸ್, ಭಿತ್ತಿಪತ್ರ, ಕರಪತ್ರಗಳನ್ನು ಅನೇಕ ಕಾಲೇಜುಗಳು ಆಂಗ್ಲ ಭಾಷೆಯಲ್ಲಿ ಪ್ರಕಟಿಸುತ್ತಿವೆ. ದಿನಪತ್ರಿಕೆಗಳಲ್ಲಿ ಇಟ್ಟು ಕಳುಹಿಸುವ ಕರಪತ್ರಗಳು ಸಹ ಆಂಗ್ಲ ಭಾಷೆಯಲ್ಲಿ ಪ್ರಕಟಿಸುತ್ತಿದ್ದಾರೆ. ಈ ಬಗ್ಗೆ ತಹಶೀಲ್ದಾರರು ಕಟ್ಟುನಿಟ್ಟಾದ ಆದೇಶ ಹೊರಡಿಸಿ ಕನ್ನಡದಲ್ಲಿಯೇ ಎಲ್ಲವನ್ನು ಪ್ರಕಟಿಸಬೇಕೆಂದು ಕರವೇ ತಾಲೂಕಾಧ್ಯಕ್ಷ ಎಚ್.ಗಂಗಣ್ಣ ತಹಸೀಲ್ದಾರ್ ಬಿ.ಟಿ. ಕುಮಾರಸ್ವಾಮಿ ಅವರಿಗೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರವೇ ಉಪಾಧ್ಯಕ್ಷ ಎಸ್. ದೇವೆಂದ್ರಗೌಡ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ರಾಚಪ್ಪ, ನಗರ ಘಟಕದ ಅಧ್ಯಕ್ಷ ದಾವಲಸಾಬ ದೊಡ್ಡಮನಿ, ಪದಾಧಿಕಾರಿಗಳಾದ ಮೌನೇಶ ಭಜಂತ್ರಿ, ಕಾಳಪ್ಪ ಮೇಸ್ತ್ರಿ, ರಾಮಕೃಷ್ಣ ಭಜಂತ್ರಿ, ವಿರುಪನಗೌಡ, ಶರಣೇಗೌಡ ಹೆಡಗಿನಾಳ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.