ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪರಿಶ್ರಮ: ನಾಯಕ
ಕನ್ನಡಪ್ರಭ ವಾರ್ತೆ, ದೇವದುರ್ಗ, ಮೇ 28
ಶೈಕ್ಷಣಿಕವಾಗಿ ಹಿಂದುಳಿದ ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ರೀತಿಯಲ್ಲಿ ಆದ್ಯತೆ ಕಲ್ಪಿಸಿ ಶಿಕ್ಷಣ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗುವುದೆಂದು ಶಾಸಕ ಎ. ವೆಂಕಟೇಶ ನಾಯಕ ಭರವಸೆ ನೀಡಿದರು.
ಪಟ್ಟಣದ ಹೊರವಲಯದಲ್ಲಿರುವ ಎಜುಕೇಷನ್ ಲೇಔಟ್‌ನಲ್ಲಿ ಇತ್ತೀಚೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 1 ಕೋಟಿ ವೆಚ್ಚದಲ್ಲಿ ಪಾಲಿಟೆಕ್ನಿಕ್ ವಿದ್ಯಾರ್ಥಿನಿಯರ ವಸತಿ ನಿಲಯದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮೂಲ ಸೌಲಭ್ಯ ಅವಶ್ಯ: ಶಿಕ್ಷಣ ಕ್ಷೇತ್ರದ ಕಡೆ ಅತಿ ಹೆಚ್ಚು ಗಮನಹರಿಸಿ, ಗುಣಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ತಾಲೂಕು ಅಭಿವೃದ್ಧಿ ಹೊಂದುತ್ತದೆ. ಮೆಡಿಕಲ್ ಕಾಲೇಜು ಪೂರ್ವದಲ್ಲಿ ವಿಜ್ಞಾನ ವಿಭಾಗದಲ್ಲಿ ಉಪನ್ಯಾಸಕರ, ಕಟ್ಟಡ, ಲ್ಯಾಬ್ ಸೇರಿದಂತೆ ಮೂಲ ಸೌಲಭ್ಯಗಳನ್ನು ಒದಗಿಸುವ ಅವಶ್ಯಕತೆಯಿದೆ. ಆಗ ಮಾತ್ರ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಮೆಡಿಕಲ್ ಕಾಲೇಜಿಗೆ ಪ್ರವೇಶ ಪಡೆಯಲು ಸಶಕ್ತರಾಗುತ್ತಾರೆಂದು ಹೇಳಿದರು.
ಗುಣಮಟ್ಟದ ಕಾಮಗಾರಿಗೆ ಆದೇಶ: ವಸತಿ ನಿಲಯದ ಕಟ್ಟಡ ಕಾಮಗಾರಿ ಮುಗಿದ ನಂತರ ಅಗತ್ಯ ಮೂಲ ಸೌಲಭ್ಯವನ್ನು ಒದಗಿಸಿಕೊಡಲಾಗುತ್ತದೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಅವರು ಗುತ್ತಿಗೆದಾರರಿಗೆ ಆದೇಶಿಸಿದರು.
ಈ ಸಂದರ್ಭದಲ್ಲಿ ತಾಪಂ ಸದಸ್ಯ ಸತ್ಯನಾರಾಯಣ ನಾಯಕ, ಕಾಂಗ್ರೆಸ್ ಮುಖಂಡರಾದ ಎ. ಮಲ್ಲಿಕಾರ್ಜುನ ಪಾಟೀಲ್, ಮುದುಕಪ್ಪ ಮಾಸ್ತರ, ಅಮರಣ್ಣಗೌಡ ಗೌರಂಪೇಟ್, ರಾಜಾಚಂದ್ರಹಾಸ ನಾಯಕ, ಯುವ ಸಾಹಿತಿ ಅಮರೇಶ ಬಲಿದವ್, ಮಹ್ಮದ ಫಾರೂಖ್, ಎಪಿಎಂಸಿ ಮಾಜಿ ಸದಸ್ಯ ಶಿವರಾಜ ಗೆಜ್ಜೆಭಾವಿ, ಅಮರೇಗೌಡ ಭೇರಿಗಿ, ಪುರಸಭೆ ಮಾಜಿ ಅಧ್ಯಕ್ಷ ರಂಗಪ್ಪ ಗೋಸಲ್, ಪುರಸಭೆ ಮಾಜಿ ಸದಸ್ಯ ಬಸವರಾಜ ಬಂಡೆಗುಡ್ಡ, ಟಿ.ನಾಗರಾಜ, ಗುರುರಾಜ ವಿಶ್ವಕರ್ಮ, ಯುವ ಮುಖಂಡರಾದ ಬಾಬು ಗೌರಂಪೇಟ್, ರಹೀಂ ಪಾಷಾ ಉದ್ದಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

