ರಾಯಚೂರು

ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

Published On :

ಸಿಂಧನೂರು: ಸಿಂಧನೂರು ವಕೀಲರ ಸಂಘದ ಅಧ್ಯಕ್ಷ, ಕಾರ್ಯದರ್ಶಿ, ಖಜಾಂಚಿಗಳ ಚುನಾವಣೆ ಜೂ.7 ರಂದು ನಿಗದಿಯಾಗಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮೇ 27ರಿಂದ ಆರಂಭಗೊಂಡಿದೆ. ಅಧ್ಯಕ್ಷ ಸ್ಥಾನಕ್ಕೆ ಕೆ.ಶರಣಬಸವ, ಕೆ.ಭೀಮನಗೌಡ, ಮುತ್ಯಾಲರಾವ್ ನಾಮಪತ್ರ ಸಲ್ಲಿಸಿದ್ದಾರೆ. ಕಾರ್ಯದರ್ಶಿ ಸ್ಥಾನಕ್ಕೆ ಫಾಲಾಕ್ಷಶಾಸ್ತ್ರಿ, ಖಾಜಿ ಮಲಿಕ್ ಅಹ್ಮದ್, ವಿಜಯಪ್ಪ ಅರಳಹಳ್ಳಿ, ಖಜಾಂಚಿ ಸ್ಥಾನಕ್ಕೆ ಸುರೇಶರೆಡ್ಡಿ ಚನ್ನಳ್ಳಿ ನಾಮಪತ್ರ ಸಲ್ಲಿಸಿದ್ದಾರೆ.
ಮೇ 29ರವರೆಗೆ ನಾಮಪತ್ರ ಸಲ್ಲಿಸಲು ಕಾಲಾವಕಾಶವಿದೆ. ಮೇ 30ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 31 ಹಾಗೂ ಜೂ.1ರಂದು ನಾಮಪತ್ರಗಳನ್ನು ಹಿಂಪಡೆಯಲು ಅವಕಾಶವಿದೆ. ಜೂ.2 ರಂದು ಕಣದಲ್ಲಿರುವ ಅಭ್ಯರ್ಥಿಗಳ ಅಂತಿಮ ಯಾದಿಯನ್ನು ಪ್ರಕಟಿಸಲಾಗುವುದು. ಅವಶ್ಯಕತೆ ಇದ್ದ ಸ್ಥಾನಗಳಿಗೆ ಜೂ.7ರಂದು ಚುನಾವಣೆ ನಡೆಸಲಾಗುವುದೆಂದು ಚುನಾವಣಾ ಅಧಿಕಾರಿ ವಿರುಪಾಕ್ಷಪ್ಪ ಗದ್ರಟಗಿ ತಿಳಿಸಿದ್ದಾರೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.