ಬೋಗಸ್ ಪಡಿತರ ಚೀಟಿ ಆರೋಪ; ಅಧಿಕಾರಿಗಳಿಂದ ಪರಿಶೀಲನೆ
ಕನ್ನಡಪ್ರಭ ವಾರ್ತೆ, ರಾಯಚೂರು, ಮೇ 28
ಇಲ್ಲಿನ ಹರಿಜನವಾಡ ಪ್ರದೇಶದ ಎರಡು ನ್ಯಾಯಬೆಲೆ ಅಂಗಡಿಗಳಲ್ಲಿ ಬೋಗಸ್ ಪಡಿತರ ಚೀಟಿ ಬಳಕೆ ಮಾಡಿ ಅಕ್ರಮವಾಗಿ ಆಹಾರ ಧಾನ್ಯ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಮಂಗಳವಾರ ಆಹಾರ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಡಾ. ಬಾಬು ಜಗಜೀವನರಾಮ್ ಆದರ್ಶ ಸಂಘದಿಂದ ಜಿಲ್ಲಾಡಳಿತಕ್ಕೆ ಸಲ್ಲಿಕೆಯಾಗಿದ್ದ ದೂರಿಗೆ ಸಂಬಂಧಿಸಿ ಡಿಸಿ ಆದೇಶದ ಹಿನ್ನೆಲೆ ಆಹಾರ ಇಲಾಖೆಯ ಉಪನಿರ್ದೇಶಕ ಗುರುರಾಜ್ ಮತ್ತಿತರರಿದ್ದ ತಂಡದ ಸದಸ್ಯರು ಮಂಗಳವಾರ ನಗರದ ಹರಿಜನವಾಡ ಪ್ರದೇಶದಲ್ಲಿ ಗಣೇಶ್ ನ್ಯಾಯಬೆಲೆ ಅಂಗಡಿ ಮತ್ತು ಬಾಪೂಜಿ ನ್ಯಾಯಬೆಲೆ ಅಂಗಡಿಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳಿ ಬೋಗಸ್ ಕಾರ್ಡ್ಗಳ ಬಗ್ಗೆ ಸಮೀಕ್ಷೆ ನಡೆಸಿದರು.
ಮನೆಗೆ ತೆರಳಿ ನಿವಾಸಿಗಳನ್ನು ಭೇಟಿ ಮಾಡಿದ ಅಧಿಕಾರಿಗಳು ಸರ್ಕಾರ ಪಡಿತರ ಪದ್ಧತಿ ಅಡಿ ಒದಗಿಸುವ ಆಹಾರ ಧಾನ್ಯಗಳು ಪ್ರತಿ ತಿಂಗಳು ಸಮರ್ಪಕವಾಗಿ ದೊರೆಯುತ್ತಿವೆಯೇ ಎಂಬ ಬಗ್ಗೆ ನಿವಾಸಿಗಳಿಂದ ಕೇಳಿ ಮಾಹಿತಿ ಪಡೆದರು. ಅದೇ ರೀತಿ ಕೆಲಸ ಸರ್ಕಾರಿ ಅಧಿಕಾರಿಗಳೂ ಅಂತ್ಯೋದಯ ಕಾರ್ಡ್ ಪಡೆದ ಬಗ್ಗೆಯೂ ಅವರ ಮನೆಗಳಿಗೆ ತೆರಳಿ ಪರಿಶೀಲಿಸಲಾಯಿತು.
ಈ ವೇಳೆ ಬೋಗಸ್ ಎಂದು ಹೇಳಲಾಗಿರುವ ಎಲ್ಲ ಪಡಿತರ ಚೀಟಿಗಳನ್ನು ಕೂಲಂಕಶವಾಗಿ ಪರಿಶೀಲಿಸಿದ ಅಧಿಕಾರಿಗಳು, ಈ ಕುರಿತು ವರದಿಯೊಂದನ್ನು ಜಿಲ್ಲಾಧಿಕಾರಿಗೆ ಸಲ್ಲಿಸುವುದಾಗಿ ತಿಳಿಸಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

